ನವದೆಹಲಿ: ದೆಹಲಿಯಲ್ಲಿ ಎನ್.ಸಿ.ಬಿ. ಅಧಿಕಾರಿಗಳು ದಾಳಿ ನಡೆಸಿದ್ದು, 100 ಕೆಜಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಶಾಹಿನ್ ಬಾಗ್ ಪ್ರದೇಶದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಅಂತರರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಎನ್.ಸಿ.ಬಿ. ಅಧಿಕಾರಿಗಳು ಬೇಧಿಸಿದ್ದಾರೆ.
50 ಕೆಜಿ ಹೆರಾಯಿನ್ ಸೇರಿದಂತೆ 100 ಕೆಜಿ ಡ್ರಗ್ಸ್ ಜಪ್ತಿ ಮಾಡಲಾಗಿದೆ. 30 ಲಕ್ಷ ರೂ. ನಗದು ವಶಕ್ಕೆ ಪಡೆಯಲಾಗಿದೆ. ಈ ಮೂಲಕ ಎಂಸಿಬಿ ಅಂತರಾಷ್ಟ್ರೀಯ ಡ್ರಗ್ಸ್ ಜಾಲವನ್ನು ಪತ್ತೆ ಹಚ್ಚಲಾಗಿದೆ. ಆಫ್ಘಾನಿಸ್ತಾನದಿಂದ ಮಾದಕವಸ್ತು ಸರಬರಾಜು ಆಗುತ್ತಿತ್ತು.
ಪ್ರಮುಖ ಕಾರ್ಯಾಚರಣೆಯಲ್ಲಿ ಆಗ್ನೇಯ ದೆಹಲಿಯ ಶಾಹೀನ್ ಬಾಗ್ ಪ್ರದೇಶದಲ್ಲಿ 50 ಕೆಜಿ ಹೆರಾಯಿನ್ ವಶಪಡಿಸಿಕೊಳ್ಳಲಾಗಿದೆ. ಇದರ ಅಂದಾಜು ಮೌಲ್ಯ ಸುಮಾರು 100 ಕೋಟಿ ರೂಪಾಯಿ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ(ಎನ್.ಸಿ.ಬಿ.)ಯ ಉನ್ನತ ಮೂಲಗಳು ತಿಳಿಸಿವೆ.