ಬೆಂಗಳೂರು: ಕೆರೆಗಳ ಸುಧಾರಣಾ ಕಾಮಗಾರಿಗೆ ಸರ್ಕಾರದಿಂದ 100 ಕೋಟಿ ರೂಪಾಯಿ ಬಿಡುಗಡೆ ಮಾಡಲಾಗಿದೆ.
ಮಳೆ ನೀರನ್ನು ಸದ್ಬಳಕೆ ಮಾಡಿಕೊಳ್ಳಲು ಕೆರೆಗಳ ಸುಧಾರಣೆ ಕಾಮಗಾರಿ ಕೈಗೊಳ್ಳಲು ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ ಸಣ್ಣ ನೀರಾವರಿ ಇಲಾಖೆಗೆ 100 ಕೋಟಿ ರೂ. ಬಿಡುಗಡೆಗೊಳಿಸಿ ಸರ್ಕಾರ ಆದೇಶಿಸಿದೆ. ಈ ಮೊತ್ತವನ್ನು ಕೇಂದ್ರ, ರಾಜ್ಯ ಸರ್ಕಾರ ಹೊರಡಿಸುವ ಮಾರ್ಗಸೂಚಿ ಅನ್ವಯ ಬಳಸಿಕೊಳ್ಳಬೇಕು. ಹಣ ಬಳಕೆಯಲ್ಲಿ ಯಾವುದೇ ಲೋಪವಾದರೆ ಸಣ್ಣ ನೀರಾವರಿ ಇಲಾಖೆಯ ಸಂಬಂಧಿಸಿದ ಅಧಿಕಾರಿಗಳು, ಸಿಬ್ಬಂದಿಯನ್ನು ನೇರವಾಗಿ ಜವಾಬ್ದಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.
ಅಭಿವೃದ್ಧಿಪಡಿಸುವ ಕೆರೆ ಮತ್ತು ಟ್ಯಾಂಕ್ ಗಳ ವಿವರಗಳನ್ನು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ವಿವರಗಳೊಂದಿಗೆ ಮಂಡಿಸಬೇಕು. ಪ್ರತಿ ಕಾಮಗಾರಿ ಪ್ರಾರಂಭ ಹಾಗೂ ಹಂತ ಹಂತವಾಗಿ ಮೂರನೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಪರಿಶೀಲನೆ ನಡೆಸುವ ವಿಧಾನವನ್ನು ನಿಯಮಾನುಸಾರ ಕೈಗೊಳ್ಳಬೇಕೆಂದು ಹೇಳಲಾಗಿದೆ.