ಪಾಟ್ನಾ: ಜನ್ ಸೂರಜ್ ಸಂಚಾಲಕ ಪ್ರಶಾಂತ್ ಕಿಶೋರ್ ಚುನಾವಣಾ ತಂತ್ರಗಾರರಾಗಿ ಯಾವುದೇ ರಾಜಕೀಯ ಪಕ್ಷ ಅಥವಾ ನಾಯಕರಿಗೆ ಸಲಹೆ ನೀಡಲು 100 ಕೋಟಿ ರೂ.ಗೂ ಅಧಿಕ ಶುಲ್ಕ ಪಡೆಯುತ್ತಾರೆ.
ಅಕ್ಟೋಬರ್ 31 ರಂದು ಬಿಹಾರದಲ್ಲಿ ಮುಂಬರುವ ಉಪ ಚುನಾವಣೆಗಾಗಿ ಪ್ರಚಾರ ಮಾಡುವ ವೇಳೆ ಕಿಶೋರ್ ಅವರು ಚುನಾವಣಾ ತಂತ್ರಗಾರರಾಗಿ ತಾವು ಪಡೆಯುವ ಶುಲ್ಕವನ್ನು ಬಹಿರಂಗಪಡಿಸಿದರು.
ಬೆಳಗಂಜ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ತಮ್ಮ ಪ್ರಚಾರಗಳಿಗೆ ಹೇಗೆ ಹಣ ನೀಡುತ್ತಾರೆ ಎಂದು ಜನರು ಆಗಾಗ್ಗೆ ನನಗೆ ಕೇಳುತ್ತಾರೆ. ವಿವಿಧ ರಾಜ್ಯಗಳಲ್ಲಿ ಹತ್ತು ಸರ್ಕಾರಗಳು ನನ್ನ ಕಾರ್ಯತಂತ್ರಗಳ ಮೇಲೆ ನಡೆಯುತ್ತಿವೆ ಎಂದು ಅವರು ಹೇಳಿದ್ದಾರೆ.
ನನ್ನ ಪ್ರಚಾರಕ್ಕಾಗಿ ಟೆಂಟ್‌ಗಳು ಮತ್ತು ಕುರ್ಚಿಗಳನ್ನು ಹಾಕಲು ನನ್ನ ಬಳಿ ಸಾಕಷ್ಟು ಹಣವಿಲ್ಲ ಎಂದು ನೀವು ಭಾವಿಸುತ್ತೀರಾ? ನಾನು ದುರ್ಬಲ ಎಂದು ನೀವು ತಿಳಿದಿದ್ದೀರಾ? ಬಿಹಾರದಲ್ಲಿ, ನನ್ನಂತೆ ಯಾರೂ ಶುಲ್ಕವನ್ನು ಕೇಳಿಲ್ಲ. ನಾನು ಕೇವಲ ಒಂದು ಚುನಾವಣೆಯಲ್ಲಿ ಯಾರಿಗಾದರೂ ಸಲಹೆ ನೀಡಿದರೆ ನನ್ನ ಶುಲ್ಕ 100 ಕೋಟಿ ಅಥವಾ ಅದಕ್ಕಿಂತ ಹೆಚ್ಚು ಆಗಿರುತ್ತದೆ. ಮುಂದಿನ ಎರಡು ವರ್ಷಗಳವರೆಗೆ ನಾನು ಅಂತಹ ಒಂದು ಚುನಾವಣಾ ಸಲಹೆಯೊಂದಿಗೆ ನನ್ನ ಪ್ರಚಾರವನ್ನು ಮುಂದುವರಿಸಬಹುದು ಎಂದು ಹೇಳಿದ್ದಾರೆ.
ಜನ್ ಸೂರಜ್ ಪಕ್ಷದಿಂದ ಅವರು ಬಿಹಾರದ ನಾಲ್ಕು ವಿಧಾನಸಭಾ ಸ್ಥಾನಗಳ ಮುಂಬರುವ ಉಪಚುನಾವಣೆಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದಾರೆ. ನವೆಂಬರ್ 13 ರಂದು ಉಪಚುನಾವಣೆಗಳನ್ನು ನಿಗದಿಪಡಿಸಲಾಗಿದ್ದು, ನವೆಂಬರ್ 23 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು.