ಬೆಂಗಳೂರು : ಮೆಟ್ರೋ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ನೀಡುವವರಿಗೆ ಬರೋಬ್ಬರಿ 10,000 ರೂ. ದಂಡ ವಿಧಿಸಲು ಬೆಂಗಳೂರು ಮೆಟ್ರೋ ರೈಲು ನಿಗಮ ನಿರ್ಧರಿಸಿದೆ.
ನಮ್ಮ ಮೆಟ್ರೋದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಲೈಂಗಿಕ ಕಿರುಕುಳ ಪ್ರಕರಣಗಳಿಗೆ ಕಡಿವಾಣಕ್ಕೆ ಬೆಂಗಳೂರು ಮೆಟ್ರೋ ರೈಲು ನಿಗಮ ಮುಂದಾಗಿದ್ದುಅಸಭ್ಯ ವರ್ತನೆಗೆ ಈ ಮೊದಲು 500 ಇದ್ದ ದಂಡವನ್ನು 10,000ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಇತ್ತೀಚೆಗೆ ಮೆಟ್ರೋದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ಎಸಗಿದ ಪ್ರಕರಣ ಕಳೆದ ತಿಂಗಳು ವರದಿಯಾಗಿತ್ತು. ಈ ವೇಳೆ ಆರೋಪಿಗೆ 10 ಸಾವಿರ ರೂ. ದಂಡ ವಿಧಿಸಿತ್ತು.