ಮಡಿಕೇರಿ: ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಗಿರಿಜನರ ಹಾಡಿಯ ತಮ್ಮಣ್ಣ(67) ಅವರ ಕುಟುಂಬದವರಿಗೆ ಅರಣ್ಯ ಇಲಾಖೆ ವತಿಯಿಂದ 15 ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಲಾಗಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ. ಗೋಪಾಲ್ ಚೆಕ್ ನೀಡಿದ್ದಾರೆ. ಶಾಸಕ ಮಂತರ್ ಗೌಡ ಅವರ ಸೂಚನೆಯಂತೆ ಮೃತರ ಕುಟುಂಬಕ್ಕೆ ಪರಿಹಾರ ನೀಡಲಾಗಿದ್ದು, ಉತ್ತಮ ಕಾರ್ಯಕ್ಕೆ ವಿನಿಯೋಗಿಸುವಂತೆ ಸಲಹೆ ನೀಡಿದ್ದಾರೆ.
ಆಡಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಂತೆ ಇದ್ದು, ಕಾಡಾನೆ ದಾಳಿಯ ಸಂದರ್ಭದಲ್ಲಿ ಎಚ್ಚರ ವಹಿಸಬೇಕು. ಅರಣ್ಯದಲ್ಲಿ ತಿರುಗಾಡಬಾರದು. ಕಾಡಾನೆ ಕಂಡಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.