20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ

ಹೊಸಪೇಟೆ: ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಕೆಕೆಆರ್‌ಟಿಸಿ(ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ) ವಿಭಾಗೀಯ ನಿಯಂತ್ರಣಾಧಿಕಾರಿ ವಿ.ಎಸ್. ಜಗದೀಶ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಕರ್ತವ್ಯ ಲೋಪ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಬಸ್ ನಿರ್ವಾಹಕರಿಂದ ಅವರು 20,000 ರೂ. ಲಂಚ ಪಡೆಯುತ್ತಿದ್ದಾಗ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಇಲಾಖಾ ವಿಚಾರಣೆ ಕೈ ಬಿಡಲು ವಿ.ಎಸ್. ಜಗದೀಶ್ 25,000 ರೂ.ಗೆ ಬೇಡಿಕೆ ಇಟ್ಟಿದ್ದಾರೆ. ಮುಂಗಡವಾಗಿ 5000 ರೂ. ಪಡೆದುಕೊಂಡಿದ್ದು, ಉಳಿದ 20 ಸಾವಿರ ರೂಪಾಯಿಗಳನ್ನು ಬುಧವಾರ ಸಂಜೆ ಹೊಸಪೇಟೆ ಕೆಕೆಆರ್ಟಿಸಿ ಬಸ್ ನಿಲ್ದಾಣದ ಮೊದಲ ಮಹಡಿಯಲ್ಲಿರುವ ಕಚೇರಿಯಲ್ಲಿ ಪಡೆಯುವಾಗ ಲೋಕಾಯುಕ್ತ ಎಸ್ಪಿ ಸಿದ್ದರಾಜು ಮಾರ್ಗದರ್ಶನದಲ್ಲಿ ಲೋಕಾಯುಕ್ತ ಡಿವೈಎಸ್ಪಿ ಶೀಲವಂತ ಹೊಸಮನಿ ನೇತೃತ್ವದಲ್ಲಿ ದಾಳಿ ನಡೆಸಿ ಹಣದ ಸಮೇತ ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read