
ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ 34 ದಿನಗಳಲ್ಲಿ 3.04 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.
ಇ-ಹುಂಡಿಗೆ ಭಕ್ತರು 3,53,441 ರೂಪಾಯಿ ಕಾಣಿಕೆ ಅರ್ಪಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಬೆಳಗ್ಗೆಯಿಂದ ತಡ ರಾತ್ರಿಯವರೆಗೆ ಹುಂಡಿ ಎಣಿಕೆ ಕಾರ್ಯ ನಡೆದಿದೆ. ನೋಟುಗಳ ರೂಪದಲ್ಲಿ 2.88 ಕೋಟಿ ರೂ., ನಾಣ್ಯಗಳ ರೂಪದಲ್ಲಿ 6.53 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಜತೆಗೆ 115 ಗ್ರಾಂ ಚಿನ್ನ, 3 ಕೆಜಿ ಬೆಳ್ಳಿಯನ್ನು ಭಕ್ತರು ಸಮರ್ಪಿಸಿದ್ದಾರೆ. 2 ಸಾವಿರ ರೂ. ಮುಖಬೆಲೆಯ 22 ನೋಟುಗಳು, ಸಿಂಗಾಪುರದ 52 ಡಾಲರ್, ಯುಎಇ ನ 27 ದಿರಮ್ ನೋಟುಗಳು ಕಾಣಿಕೆ ಹುಂಡಿಯಲ್ಲಿ ದೊರೆತಿವೆ.