alex Certify ಮಲೆ ಮಹದೇಶ್ವರ ದೇಗುಲದಲ್ಲಿ 3 ಕೋಟಿ ರೂ. ಕಾಣಿಕೆ ಸಂಗ್ರಹ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮಲೆ ಮಹದೇಶ್ವರ ದೇಗುಲದಲ್ಲಿ 3 ಕೋಟಿ ರೂ. ಕಾಣಿಕೆ ಸಂಗ್ರಹ

ಚಾಮರಾಜನಗರ: ಪ್ರಸಿದ್ಧ ಯಾತ್ರಾ ಸ್ಥಳ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಸ್ವಾಮಿ ದೇವಾಲಯದ ಹುಂಡಿಗಳಲ್ಲಿ 34 ದಿನಗಳಲ್ಲಿ 3.04 ಕೋಟಿ ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ಇ-ಹುಂಡಿಗೆ ಭಕ್ತರು 3,53,441 ರೂಪಾಯಿ ಕಾಣಿಕೆ ಅರ್ಪಿಸಿದ್ದಾರೆ. ಮಲೆ ಮಹದೇಶ್ವರ ಬೆಟ್ಟದಲ್ಲಿ ಸೋಮವಾರ ಬೆಳಗ್ಗೆಯಿಂದ ತಡ ರಾತ್ರಿಯವರೆಗೆ ಹುಂಡಿ ಎಣಿಕೆ ಕಾರ್ಯ ನಡೆದಿದೆ. ನೋಟುಗಳ ರೂಪದಲ್ಲಿ 2.88 ಕೋಟಿ ರೂ., ನಾಣ್ಯಗಳ ರೂಪದಲ್ಲಿ 6.53 ಲಕ್ಷ ರೂಪಾಯಿ ಸಂಗ್ರಹವಾಗಿದೆ. ಜತೆಗೆ 115 ಗ್ರಾಂ ಚಿನ್ನ, 3 ಕೆಜಿ ಬೆಳ್ಳಿಯನ್ನು ಭಕ್ತರು ಸಮರ್ಪಿಸಿದ್ದಾರೆ. 2 ಸಾವಿರ ರೂ. ಮುಖಬೆಲೆಯ 22 ನೋಟುಗಳು, ಸಿಂಗಾಪುರದ 52 ಡಾಲರ್, ಯುಎಇ ನ 27 ದಿರಮ್ ನೋಟುಗಳು ಕಾಣಿಕೆ ಹುಂಡಿಯಲ್ಲಿ ದೊರೆತಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...