
ಬೆಂಗಳೂರು: ರಾಜ್ಯದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಹೆಚ್ಚು ಆದ್ಯತೆ ನೀಡಿದ್ದು, 3200 ಕೋಟಿ ರೂ. ಅನುದಾನ ನೀಡಲಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಮತ್ತು ವಸತಿ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದ್ದಾರೆ.
ಬುಧವಾರ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಹಜ್ ಭವನದಲ್ಲಿ ಆಯೋಜಿಸಿದ್ದ ಸವಲತ್ತು ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ 300 ಕೋಟಿ ರೂ. ನೀಡಿದ್ದು, ಈ ಪೈಕಿ 1480 ಕೋಟಿ ರೂ. ಶಿಕ್ಷಣಕ್ಕೆ ಬಳಕೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ಸಮುದಾಯಕ್ಕೆ ನೀಡುತ್ತಿದ್ದ ಅನುದಾನ ಕಡಿತ ಮಾಡಲಾಗಿತ್ತು. ಕಾಂಗ್ರೆಸ್ ಸರ್ಕಾರ ಬಂದ ನಂತರ 3200 ಕೋಟಿ ರೂ. ಅನುದಾನ ಒದಗಿಸಿದ್ದು, ಇದರಲ್ಲಿ 1480 ಕೋಟಿ ರೂ. ಗಳನ್ನು ಶಿಕ್ಷಣಕ್ಕೆ ವೆಚ್ಚ ಮಾಡಲಾಗುತ್ತಿದೆ. ಇದರಿಂದ ಸಮುದಾಯದ ಲಕ್ಷಾಂತರ ಮಕ್ಕಳು ಇಂಜಿನಿಯರಿಂಗ್, ವೈದ್ಯಕೀಯ ಸೇರಿ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗಿದೆ ಎಂದು ಸಚಿವ ಜಮೀರ್ ಹೇಳಿದ್ದಾರೆ.