ಮೈಸೂರು : ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಗೃಹಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ರೂ. ಖರ್ಚಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೃಹಲಕ್ಷ್ಮಿಗೆ ವಾರ್ಷಿಕ 32 ಸಾವಿರ ಕೋಟಿ ರೂ. ಖರ್ಚಾಗುತ್ತದೆ. ದೇಶದ ಇತಿಹಾಸದಲ್ಲೇ ಒಂದು ಯೋಜನೆ ಇಷ್ಟು ದೊಡ್ಡ ಪ್ರಮಾಣದ ಹಣ ಖರ್ಚು ಮಾಡುತ್ತಿರುವುದು ಇದೇ ಮೊದಲು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸರ್ಕಾರ 100 ದಿನ ಪೂರೈಸಿದ ವಿಚಾರವಾಗಿ ನಮಗೆ ಇದೇನು ಸವಾಲು ಎನ್ನಿಸಲಿಲ್ಲ. ಗ್ಯಾರಂಟಿ ವಿಚಾರದಲ್ಲಿ ನಮಗೆ ಬದ್ಧತೆ ಇತ್ತು. ಹೀಗಾಗಿ ಅವುಗಳ ಜಾರಿ ಕಠಿಣ ಅನಿಸಲಿಲ್ಲ. ಮಾತು ಕೊಟ್ಟಂತೆ ಗ್ಯಾರಂಟಿಗಳ ಜಾರಿ ಮಾಡುತ್ತಿದ್ದೇವೆ ಎಂದರು.