![](https://kannadadunia.com/wp-content/uploads/2021/11/CM-Siddaramia15555238331564170798-1.jpg)
ಬೆಂಗಳೂರು : ರಾಜ್ಯದಲ್ಲಿ ಈ ವರ್ಷ ಗ್ಯಾರಂಟಿ ಯೋಜನೆಗಳಿಗೆ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬಜೆಟ್ ಮೇಲಿನ ಚರ್ಚೆಗೆ ಸಂಬಂಧಿಸಿದಂತೆ ವಿಧಾನಸಭೆಯಲ್ಲಿ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ 36,000 ಕೋಟಿ ರೂ. ವೆಚ್ಚ ಮಾಡಿದ್ದೇವೆ. ಶಕ್ತಿ ಯೋಜನೆ, ಗೃಹಜ್ಯೋತಿ, ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ – ಈ ಕಾರ್ಯಕ್ರಮಗಳಿಗೆ 36,000 ಕೋಟಿ ರೂ. ಬಳಸಲಾಗಿದೆ. ಮುಂದಿನ ಬಜೆಟ್ ನಲ್ಲಿ 52,009 ಕೋಟಿ ಒದಗಿಸಿದ್ದು, ಇದರೊಂದಿಗೆ ಶಿಕ್ಷಣ, ಆರೋಗ್ಯ, ರಸ್ತೆಗಳು, ಶಾಂತಿ ಸುವ್ಯವಸ್ಥೆ ಎಲ್ಲದಕ್ಕೂ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಜಿಡಿಪಿ- 2023- 24 ರಲ್ಲಿ 25,63,247 ಕೋಟಿ ರೂ. ಇತ್ತು. 2024- 25 ಕ್ಕೆ 28,09,063 ಕೋಟಿ ರೂ. ಆಗುವ ನಿರೀಕ್ಷೆ ಇದೆ. ಅಂದರೆ 2,41,723 ಕೋಟಿ ರೂ. ಹೆಚ್ಚು. ಆದ್ದರಿಂದ ಜಿಡಿಪಿಯೂ ಹೆಚ್ಚಾಗಿದೆ, ಬಜೆಟ್ ಗಾತ್ರವೂ ಹೆಚ್ಚಾಗಿದೆ. ಇದರಿಂದ ರಾಜ್ಯದಲ್ಲಿ ಏನೂ ಅಭಿವೃದ್ಧಿ ಮಾಡಿಲ್ಲ ಎಂದು ವಿರೋಧ ಪಕ್ಷದವರು ಮಾಡಿರುವ ಆಪಾದನೆಯಲ್ಲಿ ಯಾವುದೇ ತಿರುಳಿಲ್ಲ ಎಂಬುದು ಸಾಬೀತಾಗುತ್ತದೆ ಎಂದು ಹೇಳಿದ್ದಾರೆ.