alex Certify ಸಿಲಿಂಡರ್ ಸ್ಪೋಟ ದುರಂತದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಿಲಿಂಡರ್ ಸ್ಪೋಟ ದುರಂತದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವ ಕಾಲೋನಿ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ನಡೆದ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಬಿಟ್ಟ 8 ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರು ಈ ಕುರಿತಾಗಿ ಬರೆದ ಪತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದಿಸಿದ್ದು, ಪರಿಹಾರ ನೀಡಲು ಸೂಚಿಸಿದ್ದಾರೆ. ಸಿಲಿಂಡರ್ ಸ್ಪೋಟ ದುರಂತದಲ್ಲಿ 9 ಮಾಲಾಧಾರಿಗಳು ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೆ ಎಂಟು ಜನ ಮೃತಪಟ್ಟಿದ್ದಾರೆ.

ನಿಜಲಿಂಗಪ್ಪ ಬೇಪುರಿ, ಸಂಜಯ್ ಸವದತ್ತಿ, ಮಂಜು, ಲಿಂಗರಾಜ ಬೀರನೂರ, ತೇಜಸ್ ಸುತಾರೆ, ಶಂಕರ, ಪ್ರಕಾಶ್ ಭಾರಕೇರ ಅವರ ಕುಟುಂಬಕ್ಕೆ ಪರಿಹಾರ ನೀಡಲಾಗುವುದು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...