
ಬೆಂಗಳೂರು: ರಾಜ್ಯದ ಕ್ಷಯ ರೋಗಿಗಳಿಗೆ ಪ್ರತಿ ತಿಂಗಳು ನಿಕ್ಷಯ್ ಪೋಷಣ್ ಯೋಜನೆ 500 ರೂಪಾಯಿ ಹಣ ಬಿಡುಗಡೆಗೆ ಕ್ರಮ ಕೈಗೊಳ್ಳಲಾಗಿದೆ.
ಆರೋಗ್ಯ ಇಲಾಖೆ ಜಂಟಿ ನಿರ್ದೇಶಕರು ಈ ಬಗ್ಗೆ ಮಾಹಿತಿ ನೀಡಿದ್ದುಮ ಈ ತಿಂಗಳಾಂತ್ಯಕ್ಕೆ ರಾಜ್ಯದ ಕ್ಷಯ ರೋಗಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾವಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಪ್ರಸ್ತುತ ಜಾರಿಯಲ್ಲಿರುವ ಖಜಾನೆ -2 ತಂತ್ರಾಂಶಕ್ಕೆ ಆಧಾರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಕಡ್ಡಾಯವಾಗಿದೆ. ರೋಗಿಯ ಬ್ಯಾಂಕ್ ಖಾತೆ ಸಂಖ್ಯೆಯಲ್ಲಿ ವ್ಯತ್ಯಾಸ, ಆಧಾರ್ ಜೋಡಣೆ ಆಗದ ಖಾತೆಗಳಿಗೆ ಹಣ ವರ್ಗಾವಣೆಯಾಗಿಲ್ಲ. ಆಧಾರ್ ಸೇವಾ ಸಿಂಧು ಪೋರ್ಟಲ್ ಮೂಲಕ 30,000ಕ್ಕೂ ಅಧಿಕ ರೋಗಿಗಳಿಗೆ 30 ಕೋಟಿ ರೂಪಾಯಿಗೂ ಅಧಿಕ ಹಣ ವರ್ಗಾವಣೆ ಮಾಡಲಾಗಿದ್ದುಮ ಉಳಿದವರ ಖಾತೆಗೂ ಹಣ ವರ್ಗಾವಣೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.