ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತವಾಗಿ ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ, ಯಾರದ್ರೂ ಹಾಕಿದ್ರೆ 50 ಸಾವಿರ ರೂ.ದಂಡ ವಿಧಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನ ಕುಮಾರಕೃಷಾ ಗೆಸ್ಟ್ ಹೌಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರು ನಗರದ ಸೌಂದರ್ಯ ಕಾಪಾಡುವ ದೃಷ್ಟಿಯಿಂದ ಬೆಂಗಳೂರು ನಗರದಲ್ಲಿ ಯಾರೂ ಕೂಡ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸುವಂತಿಲ್ಲ ಎಂದು ಸೂಚನೆ ನೀಡಿದ್ದಾರೆ.
ಸಿಎಂ, ಡಿಸಿಎಂ, ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಯಾರೂ ಫ್ಲೆಕ್ಸ್, ಬ್ಯಾನರ್ ಕಟ್ಟುವಂತಿಲ್ಲ. ಸರ್ಕಾರಿ ಜಾಹೀರಾತು ಪ್ರಕಟಿಸುವ ಬಗ್ಗೆ ಶೀಘ್ರದಲ್ಲೇ ನಿಯಮ ರೂಪಿಸುತ್ತೇವೆ. ಫ್ಲೆಕ್ಸ್, ಬ್ಯಾನರ್ ಹಾಕದಂತೆ ವೈಯಕ್ತಿಕವಾಗಿ ಮನವಿ ಮಾಡುತ್ತೇನೆ. ಧಾರ್ಮಿಕ, ರಾಜಕೀಯ, ಸಾಮಾಜಿಕ ಫ್ಲೆಕ್ಸ್ ಹಾಕಿದವರ ಮೇಲೆ ಮುಲ್ಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.