
ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಿಸಿರುವಂತೆ 5,300 ಕೋಟಿ ರೂಪಾಯಿ ಅನುದಾನವನ್ನು ಕೊಡಿಸುವ ಹೊಣೆ ನನ್ನದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಅವರ ಪರವಾಗಿ ಭರಮಸಾಗರದಲ್ಲಿ ಭಾನುವಾರ ಪ್ರಚಾರ ನಡೆಸಿದ ಯಡಿಯೂರಪ್ಪ ಮಾತನಾಡಿ, ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಘೋಷಿಸಲಾದ 5300 ಕೋಟಿ ರೂ. ಅನುದಾನವನ್ನು ಪ್ರಧಾನಿ ಮೋದಿ ಅವರಿಂದ ಕೊಡಿಸುವ ಹೊಣೆ ನನ್ನದು ಎಂದು ಭರವಸೆ ನೀಡುತ್ತೇನೆ ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕೇವಲ ಚುನಾವಣೆ ಗ್ಯಾರಂಟಿಯಾಗಿದೆ. ಮೋದಿಯವರ ಗ್ಯಾರಂಟಿ ಶೋಷಿತರು, ಬಡವರು, ಹಿಂದುಳಿದವರ ಜೀವನ ಸುಧಾರಿಸುವ ಗ್ಯಾರಂಟಿಯಾಗಿದೆ ಎಂದು ಹೇಳಿದ್ದಾರೆ.