ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ 5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಬೆಳೆ ನಷ್ಟದಿಂದ ನೊಂದ ಪ್ರತಿ ರೈತರಿಗೆ ತಲಾ 2 ಸಾವಿರ ರೂ.ನಂತೆ 30,24,795 ರೈತರಿಗೆ 573.28 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.
ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದು ಐದು ತಿಂಗಳಾದರೂ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರಿಗೆ ಮನವಿ ಮಾಡಿದ್ದರೂ, ಹಣ ಬಿಡುಗಡೆ ಮಾಡಿಲ್ಲ ಎಂದು ದೂರಿದ್ದಾರೆ.
ಕೇಂದ್ರ ಬರ ಅಧ್ಯಯನ ತಂಡ ವರದಿ ನೀಡಿದ್ದರೂ ಸಹ ಪ್ರಯೋಜನವಾಗಿಲ್ಲ. ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರಕ್ಕೆ ಹಣ ನೀಡಲಾಗುತ್ತಿಲ್ಲ ಎಂದು ನಾವು ಹೇಳುತ್ತಿಲ್ಲ. ಕೇಂದ್ರ ಕೊಡದೇ ಇದ್ದರೂ ಸರ್ಕಾರದ ಬೊಕ್ಕಸದಿಂದಲೇ ಪರಿಹಾರ ನೀಡುತ್ತಿದ್ದೇವೆ. ಕೇಂದ್ರದಿಂದ ಹಣ ಬಂದ ಕೂಡಲೇ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.