alex Certify ಬರದಿಂದ ತೋಟಗಾರಿಕೆ ಬೆಳೆ ಹಾನಿಗೊಳಗಾದ 30 ಲಕ್ಷ ರೈತರಿಗೆ 574 ಕೋಟಿ ರೂ. ಪರಿಹಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬರದಿಂದ ತೋಟಗಾರಿಕೆ ಬೆಳೆ ಹಾನಿಗೊಳಗಾದ 30 ಲಕ್ಷ ರೈತರಿಗೆ 574 ಕೋಟಿ ರೂ. ಪರಿಹಾರ

ಬೆಂಗಳೂರು: ರಾಜ್ಯದಲ್ಲಿ ತೀವ್ರ ಬರಗಾಲದಿಂದ 5,11,208 ಎಕರೆ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು, ಬೆಳೆ ನಷ್ಟದಿಂದ ನೊಂದ ಪ್ರತಿ ರೈತರಿಗೆ ತಲಾ 2 ಸಾವಿರ ರೂ.ನಂತೆ 30,24,795 ರೈತರಿಗೆ 573.28 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ.

ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಪತ್ರ ಬರೆದು ಐದು ತಿಂಗಳಾದರೂ ಈವರೆಗೆ ಹಣ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್‌ ಶಾ ಅವರಿಗೆ ಮನವಿ ಮಾಡಿದ್ದರೂ, ಹಣ ಬಿಡುಗಡೆ ಮಾಡಿಲ್ಲ ಎಂದು ದೂರಿದ್ದಾರೆ.

ಕೇಂದ್ರ ಬರ ಅಧ್ಯಯನ ತಂಡ ವರದಿ ನೀಡಿದ್ದರೂ ಸಹ ಪ್ರಯೋಜನವಾಗಿಲ್ಲ. ಗ್ಯಾರಂಟಿ ಯೋಜನೆಯಿಂದಾಗಿ ಸರ್ಕಾರಕ್ಕೆ ಹಣ ನೀಡಲಾಗುತ್ತಿಲ್ಲ ಎಂದು ನಾವು ಹೇಳುತ್ತಿಲ್ಲ. ಕೇಂದ್ರ ಕೊಡದೇ ಇದ್ದರೂ ಸರ್ಕಾರದ ಬೊಕ್ಕಸದಿಂದಲೇ ಪರಿಹಾರ ನೀಡುತ್ತಿದ್ದೇವೆ. ಕೇಂದ್ರದಿಂದ ಹಣ ಬಂದ ಕೂಡಲೇ ರೈತರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...