ಕಲಬುರಗಿ: ಕಲಬುರಗಿಯ ಹೈದರಾಬಾದ್ ಶಿಕ್ಷಣ ಸಂಸ್ಥೆಯಲ್ಲಿ ವಿದ್ಯಾರ್ಥಿಗಳ 81.21 ಕೋಟಿ ರೂ. ಸ್ಟೈಫಂಡ್ ದುರ್ಬಳಕೆ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಸೈಬರ್ ಠಾಣೆಯಲ್ಲಿ ಭಾನುವಾರ ಪ್ರಕರಣ ದಾಖಲಿಸಲಾಗಿದೆ.
ಹೈದರಾಬಾದ್ ಶಿಕ್ಷಣ ಸಂಸ್ಥೆಯ ಮಹಾದೇವಪ್ಪ ರಾಂಪೂರೆ ವೈದ್ಯಕೀಯ ಕಾಲೇಜಿನ ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ 81.21 ಕೋಟಿ ರೂ. ಸ್ಟೈಫಂಡ್ ದುರ್ಬಳಕೆ ಆರೋಪದಡಿ ಸಂಸ್ಥೆಯ ಮಾಜಿ ಅಧ್ಯಕ್ಷ ಸೇರಿ ನಾಲ್ವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ವಿದ್ಯಾರ್ಥಿಗಳು ಮತ್ತು ವಕೀಲ ವಿನೋದ ಕುಮಾರ್ ಅವರು ನೀಡಿದ ದೂರಿನ ಅನ್ವಯ ಹೈದರಾಬಾದ್ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷ ಭೀಮಶಂಕರ ಬಿಲಗುಂದಿ, ಪ್ರಾಂಶುಪಾಲ ಡಾ.ಎಸ್.ಎಂ. ಪಾಟೀಲ್, ಅಕೌಂಟೆಂಟ್ ಸುಭಾಷ್ ಜಗನ್ನಾಥ, ಕೆನರಾ ಬ್ಯಾಂಕ್ ಎಂಆರ್‌ಎಂಸಿ ಶಾಖೆ ವ್ಯವಸ್ಥಾಪಕರ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.