ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಸಮೀಪ ಇರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 9.2 ಕೋಟಿ ಮೌಲ್ಯದ ಕೊಕೇನ್ ಜಪ್ತಿ ಮಾಡಲಾಗಿದೆ.
ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ದುಬೈನಿಂದ ಬಂದಿದ್ದ ವಿಮಾನದಲ್ಲಿ ಅಕ್ರಮವಾಗಿ ಕೊಕೇನ್ ಸಾಗಿಸಲಾಗುತ್ತಿತ್ತು. ಪ್ರಯಾಣಿಕ ನಿಂದ 920 ಗ್ರಾಂ ನಾರ್ಕೊಟಿಕ್ಸ್ ಕ್ಯಾಪ್ಸುಲ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಯನ್ನು ಡಿಆರ್ಐ ಅಧಿಕಾರಿಗಳು ಸ್ಕ್ಯಾನಿಂಗ್ ಮಾಡಿಸಿದ್ದಾರೆ. ದೇಹದಲ್ಲಿ ಮರೆಮಾಚಲಾಗಿದ್ದ ಕ್ಯಾಪ್ಸುಲ್ ಗಳನ್ನು ಹೊರ ತೆಗೆಯಲಾಗಿದೆ. ಎನ್.ಡಿ.ಪಿ.ಎಸ್. ಕಾಯ್ದೆ 1985 ರ ಅಡಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.