alex Certify ಹಾಸನದಲ್ಲಿ 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಸನದಲ್ಲಿ 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ

ಹಾಸನ: ಹಾಸನದ ವುಡ್ ಪೆಕರ್ ಡಿಸ್ಟಿಲರೀಸ್ ಅಂಡ್ ಬ್ರೆವರೀಸ್ ಫ್ಯಾಕ್ಟರಿ ಮೇಲೆ ದಾಳಿ ನಡೆಸಲಾಗಿದೆ. ದಾಳಿಯ ವೇಳೆ ಅಬಕಾರಿ ಅಧಿಕಾರಿಗಳು 9.5 ಕೋಟಿ ರೂ. ಮೌಲ್ಯದ ಬಿಯರ್ ಜಪ್ತಿ ಮಾಡಿದ್ದಾರೆ.

ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಸ್ತಾನಿನಲ್ಲಿ ನ್ಯೂನ್ಯತೆ ಕಂಡು ಬಂದ ಹಿನ್ನೆಲೆಯಲ್ಲಿ 9 ಕೋಟಿ ರೂಪಾಯಿ ಮೌಲ್ಯದ ಬಿಯರ್ ವಶಕ್ಕೆ ಪಡೆಯಲಾಗಿದೆ. ಪವರ್ ಕೂಲ್, ಲೆಜೆಂಡ್, ಬ್ಲಾಖ್ ಪೋರ್ಟ್, ವುಡ್ ಪೆಕರ್ ಬ್ರಾಂಡ್ ನ ಬಿಯರ್ ವಶಕ್ಕೆ ಪಡೆಯಲಾಗಿದೆ.

ಒಟ್ಟು 56,236 ಬಾಕ್ಸ್ ಗಳಲ್ಲಿದ್ದ 9,54,08,422 ರೂ. ಮೌಲ್ಯದ 5,63,756, ಲೀಟರ್ ಬಿಯರ್ ವಶಕ್ಕೆ ಪಡೆಯಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...