ಬೆಂಗಳೂರು: ಬಿಜೆಪಿ ಹಾಗೂ ಆರ್ ಎಸ್ ಎಸ್ ಮಾಡಿದ ಹಾನಿಯನ್ನು ಸರಿಪಡಿಸಲು ಭಾರತ್ ಜೋಡೋ ಯಾತ್ರೆ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದ್ದು ಆರ್ ಎಸ್ ಎಸ್ ಖಾಕಿ ಚಡ್ಡಿಗೆ ಬೆಂಕಿ ಹಚ್ಚಿದ ಫೋಟೋವನ್ನು ಟ್ವಿಟರ್ ನಲ್ಲಿ ಶೇರ್ ಮಾಡಿದೆ.
ಕಾಂಗ್ರೆಸ್ ಟ್ವೀಟ್ ಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿರುವ ಸಂಸದ ತೇಜಸ್ವಿ ಸೂರ್ಯ, ಈ ಚಿತ್ರ ಕಾಂಗ್ರೆಸ್ ರಾಜಕೀಯದ ಸಂಕೇತವಾಗಿದೆ. ದೇಶದಲ್ಲಿ ಬೆಂಕಿ ಹೊತ್ತಿಸುತ್ತಿದೆ. ಈ ಹಿಂದೆ ಅವರು ಹಚ್ಚಿದ ಬೆಂಕಿ ಭಾರತದ ಬಹುತೇಕ ಭಾಗಗಳಲ್ಲಿ ಅವರನ್ನು ಸುಟ್ಟುಹಾಕಿದೆ. ರಾಜಸ್ಥಾನ, ಛತ್ತೀಸ್ ಗಢದಲ್ಲಿಯೂ ಶೀಘ್ರದಲ್ಲಿಯೇ ಬೂದಿಯಾಗಲಿದೆ ಎಂದು ತಿರುಗೇಟು ನೀಡಿದ್ದಾರೆ.
1984ರ ಸಿಖ್ ವಿರೋಧಿ ದಂಗೆ ಹಾಗೂ 2002ರ ಗೋದ್ರಾ ರೈಲು ದಂಗೆ ಪ್ರಕರಣಕ್ಕೆ ಕಾಂಗ್ರೆಸ್ ಕಾರಣ. 1984ರಲ್ಲಿ ಕಾಂಗ್ರೆಸ್ ಬೆಂಕಿ ದೆಹಲಿಯನ್ನು ಸುಟ್ತಿತು. 2002ರಲ್ಲಿ ಗೋಧ್ರಾದಲ್ಲಿ 59 ಕರಸೇವಕರನ್ನು ಜೀವಂತವಾಗಿ ಸುಟ್ಟುಹಾಕಿತು. ಇದೀಗ ಮತ್ತೆ ಅದೇ ಕೆಲಸಕ್ಕೆ ಕರೆ ನೀಡುತ್ತಿದ್ದಾರೆ. ರಾಹುಲ್ ಗಾಂಧಿ ಭಾರತದ ವಿರುದ್ಧ ಹೋರಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.