ರಾಜ್ಯದಲ್ಲಿ ಕೆಲವು ದಿನಗಳಿಂದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವಿಚಾರ ಮುನ್ನೆಲೆಗೆ ಬಂದಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರ್.ಎಸ್.ಎಸ್. ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಅಲ್ಲದೆ ಹಲವಾರು ಮಂದಿ ಪಠ್ಯಪುಸ್ತಕ ಪರಿಷ್ಕರಣೆ ಹೆಸರಿನಲ್ಲಿ ಆರ್.ಎಸ್.ಎಸ್. ವಿಚಾರಧಾರೆಗಳನ್ನು ತುರುಕಲಾಗುತ್ತಿದೆ ಎಂದು ಆರೋಪಿಸುತ್ತಿದ್ದಾರೆ.
ಸೋಶಿಯಲ್ ಮೀಡಿಯಾದಲ್ಲೂ ಆರ್.ಎಸ್.ಎಸ್. ಪರ – ವಿರೋಧದ ಚರ್ಚೆಗಳು ನಡೆಯುತ್ತಿದ್ದು, ಪ್ರಾಕೃತಿಕ ವಿಕೋಪದ ಸಂದರ್ಭಗಳಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಮಾಡಿರುವ ಸೇವೆಗಳನ್ನು ಶ್ಲಾಘಿಸಿ ಪೋಸ್ಟ್ ಹಾಕಲಾಗುತ್ತಿದೆ. ಇದರ ಮಧ್ಯೆ ಆರ್.ಎಸ್.ಎಸ್. ಪ್ರಾರ್ಥನಾ ಗೀತೆ ‘ನಮಸ್ತೆ ಸದಾ ವತ್ಸಲೆ’ ಯನ್ನು ಹಾಡಿರುವ ಮೂರು ವರ್ಷದ ಬಾಲಕನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೊಪ್ಪಳ ಜಿಲ್ಲೆ ಕಾರಟಗಿಯ 2ನೇ ತರಗತಿ ವಿದ್ಯಾರ್ಥಿ ಲೋಹಿತ್ ಎಂಬಾತ ಈ ಪ್ರಾರ್ಥನಾ ಗೀತೆಯನ್ನು ಈ ಹಿಂದೆ ಹಾಡಿದ್ದು, ಹಳೆ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ಸದ್ದು ಮಾಡುತ್ತಿದೆ. ಬಿಜೆಪಿ ರಾಷ್ಟ್ರೀಯ ನಾಯಕರು, ಚಿತ್ರನಟರು, ಅನಿವಾಸಿ ಭಾರತೀಯರು ಈ ವಿಡಿಯೋವನ್ನು ಶೇರ್ ಮಾಡಿಕೊಂಡು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಬದ್ಧತೆಯನ್ನು ಕೊಂಡಾಡಿದ್ದಾರೆ.