ಬಿಜೆಪಿ ನಾಯಕರು ತಮ್ಮ ವಿರುದ್ಧ ಆರೋಪ ಮಾಡುತ್ತಿರುವ ಕುರಿತಂತೆ ಕಿಡಿ ಕಾರಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರ್ ಎಸ್ ಎಸ್ ನವರು ಬರೆದುಕೊಟ್ಟಂತೆ ಈ ಗಿರಾಕಿಗಳು ಭಾಷಣ ಮಾಡುತ್ತಿದ್ದಾರೆ. ಅಲ್ಲದೆ ಅವರಿಗೆ ನನ್ನನ್ನು ಕಂಡರೆ ಭಯವಿದ್ದು, ಹೀಗಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಹೇಗಾದರೂ ಮಾಡಿ ನನ್ನ ಇಮೇಜ್ ಹಾಳು ಮಾಡಬೇಕೆಂಬುದು ಅವರ ಉದ್ದೇಶವಾಗಿದೆ. ಸುಳ್ಳಿನ ಫ್ಯಾಕ್ಟರಿ ಇಟ್ಟಿರುವ ಆರ್ ಎಸ್ ಎಸ್ ನವರು ಬರೆದುಕೊಡುವ ಭಾಷಣವನ್ನು ಇವರು ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಇನ್ನು ನಳಿನ್ ಕುಮಾರ್ ಕಟೀಲ್ ಅವರ ಆರೋಪದ ಕುರಿತಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಅವರೊಬ್ಬ ಜೋಕರ್. ಅಲ್ಲದೆ ಆರ್ ಎಸ್ ಎಸ್ ಹಿನ್ನೆಲೆಯಿಂದ ಬಂದಿದ್ದಾರೆ. ಆರ್ ಎಸ್ ಎಸ್ ಎಂದಿಗೂ ಸಾಮಾಜಿಕ ನ್ಯಾಯದ ಪರ ಇರಲಿಲ್ಲ ಎಂದು ವಾಗ್ದಾಳಿ ನಡೆಸಿದರು.