ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ(RSS) ಕರ್ನಾಟಕ ಘಟಕ ತೀವ್ರ ಸಂತಾಪ ಸೂಚಿಸಿದೆ.
ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದ ಕುಟುಂಬದವರು, ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿಯನ್ನು ಭಗವಂತ ನೀಡಲಿ, ಅಗಲಿದ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಪ್ರಾರ್ಥಿಸಲಾಗಿದೆ.
ಈ ಬಗ್ಗೆ ಆರ್.ಎಸ್.ಎಸ್. ಸರ ಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಮತ್ತು ಕ್ಷೇತ್ರೀಯ ಸರಸಂಘಚಾಲಕ ಡಾ.ಬಿ. ವಾಮನ ಶೆಣೈ ಅವರು ಜಂಟಿ ಹೇಳಿಕೆ ನೀಡಿದ್ದು, ಎಸ್.ಎಂ. ಕೃಷ್ಣ ವಿಧಿವಶರಾದ ಸುದ್ದಿ ತಿಳಿದು ಅತೀವ ದುಃಖ ಉಂಟು ಮಾಡಿದೆ ಎಂದು ತಿಳಿಸಿದ್ದಾರೆ.
ಎಸ್.ಎಂ. ಕೃಷ್ಣ ಅವರು, ಸಚಿವರು, ಮುಖ್ಯಮಂತ್ರಿ, ಸ್ಪೀಕರ್, ಕೇಂದ್ರ ಸಚಿವರು, ಮಹಾರಾಷ್ಟ್ರ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದು, ರಾಜಕೀಯ ರಂಗದಲ್ಲಿ ಮೇರು ವ್ಯಕ್ತಿತ್ವ ಹೊಂದಿದ್ದರೂ ಎಂದು ಸ್ಮರಿಸಿದ್ದಾರೆ.