ರಾಷ್ಟ್ರೀಯ ಸ್ವಯಂ ಸೇವಕ ಸಂಘ ತಮಿಳುನಾಡಿನಲ್ಲಿ ಪಥ ಸಂಚಲನ ನಡೆಸುವುದಕ್ಕೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಈ ಮೊದಲು ಮದ್ರಾಸ್ ಹೈಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸ್ಟಾಲಿನ್ ನೇತೃತ್ವದ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿಯನ್ನು ವಜಾಗೋಳಿಸಲಾಗಿದೆ.
ಹೀಗಾಗಿ ತಮಿಳುನಾಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಪಥ ಸಂಚಲನ ನಡೆಸಲು ಮದ್ರಾಸ್ ಹೈಕೋರ್ಟಿನ ಏಕ ಸದಸ್ಯ ಪೀಠ ನೀಡಿದ್ದ ಅನುಮತಿಯನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಂತಾಗಿದೆ.