ಕಲಬುರಗಿ: ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಸಿ) ಅಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾದ ಮಕ್ಕಳ 2020-21 ನೇ ಸಾಲಿನ ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಆನ್‍ಲೈನ್ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಕೆ ದಿನಾಂಕವನ್ನು 2021 ರ ಮಾರ್ಚ್ 4 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.
ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಆನ್‍ಲೈನ್ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಈ ಹಿಂದೆ 2021ರ ಜನವರಿ 4 ರಿಂದ ಫೆಬ್ರವರಿ 4ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಆದ್ದರಿಂದ ಖಾಸಗಿ ಅನುದಾನರಹಿತ ಶಾಲೆಗಳು ಮೇಲ್ಕಂಡ ನಿಗದಿಪಡಿಸಿದ ದಿನಾಂಕದೊಳಗಾಗಿ ಪ್ರಸ್ತಾವನೆ ಸಲ್ಲಿಸದೇ ಇದ್ದಲ್ಲಿ ಮುಂದಿನ ಆಗು-ಹೋಗುಗಳಿಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರು ಜವಾಬ್ದಾರರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.