alex Certify ಶಾಲಾ ಮಕ್ಕಳ ಆರ್.ಟಿ.ಇ. ಶುಲ್ಕ ಮರುಪಾವತಿ: ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ ಮಕ್ಕಳ ಆರ್.ಟಿ.ಇ. ಶುಲ್ಕ ಮರುಪಾವತಿ: ಇಲ್ಲಿದೆ ಮುಖ್ಯ ಮಾಹಿತಿ

ಕಲಬುರಗಿ: ಶಿಕ್ಷಣ ಹಕ್ಕು ಕಾಯಿದೆ ಸೆಕ್ಷನ್ 12(1)(ಸಿ) ಅಡಿ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ದಾಖಲಾದ ಮಕ್ಕಳ 2020-21 ನೇ ಸಾಲಿನ ಶುಲ್ಕ  ಮರುಪಾವತಿಗೆ ಸಂಬಂಧಿಸಿದಂತೆ ಆನ್‍ಲೈನ್ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಕೆ ದಿನಾಂಕವನ್ನು 2021 ರ ಮಾರ್ಚ್ 4 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಸಾರ್ವಜನಿಕ ಶಿಕ್ಷಣ  ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಶುಲ್ಕ ಮರುಪಾವತಿಗೆ ಸಂಬಂಧಿಸಿದಂತೆ ಆನ್‍ಲೈನ್ ತಂತ್ರಾಂಶದ ಮೂಲಕ ಬೇಡಿಕೆ ಸಲ್ಲಿಸಲು ಈ ಹಿಂದೆ 2021ರ ಜನವರಿ 4 ರಿಂದ ಫೆಬ್ರವರಿ 4ರವರೆಗೆ ಕಾಲಾವಕಾಶವನ್ನು ನೀಡಲಾಗಿತ್ತು. ಆದ್ದರಿಂದ ಖಾಸಗಿ ಅನುದಾನರಹಿತ ಶಾಲೆಗಳು ಮೇಲ್ಕಂಡ ನಿಗದಿಪಡಿಸಿದ ದಿನಾಂಕದೊಳಗಾಗಿ ಪ್ರಸ್ತಾವನೆ ಸಲ್ಲಿಸದೇ ಇದ್ದಲ್ಲಿ ಮುಂದಿನ ಆಗು-ಹೋಗುಗಳಿಗೆ ಸಂಬಂಧಪಟ್ಟ ಶಾಲೆಯ ಮುಖ್ಯೋಪಾಧ್ಯಾಯರು ಜವಾಬ್ದಾರರಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...