
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ ವತಿಯಿಂದ 2025- 26 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ(RTE) ಖಾಸಗಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿಗೆ ಸಂಬಂಧಿಸಿದಂತೆ ಮಾರ್ಗಸೂಚಿ ಪ್ರಕಟಿಸಲಾಗಿದೆ.
ಅನುದಾನಿತ ಮತ್ತು ಖಾಸಗಿ ಶಾಲೆಗಳಲ್ಲಿ ಎಲ್ಕೆಜಿ ಮತ್ತು ಒಂದನೇ ತರಗತಿಗೆ ಮಕ್ಕಳ ಪ್ರವೇಶಕ್ಕೆ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಮಗು ಮತ್ತು ಪೋಷಕರ ಆಧಾರ್ ಕಾರ್ಡ್ ಗಳನ್ನು ನೀಡಬೇಕು. ಆರ್.ಟಿ.ಇ. ಅರ್ಜಿ ಸಲ್ಲಿಸುವ ವೇಳೆ ಸಮಸ್ಯೆ ಉಂಟಾದಲ್ಲಿ ನ್ಯೂನತೆ ಸರಿಪಡಿಸಲು ತಂತ್ರಾಂಶ ಅಭಿವೃದ್ದಿಪಡಿಸಲಾಗಿದ್ದು, ಇದರಲ್ಲಿ ನಿರ್ದಿಷ್ಟ ದೂರುಗಳನ್ನು ದಾಖಲೆಗಳೊಂದಿಗೆ ಸಲ್ಲಿಸಬಹುದಾಗಿದೆ.
ಮಾರ್ಚ್ 28ರಂದು ಸರ್ಕಾರಿ, ಅನುದಾನಿತ ಮತ್ತು ಖಾಸಗಿ ಶಾಲೆಗಳು ಸೇರಿ ನೆರೆಹೊರೆಯ ಶಾಲೆಗಳ ತಾತ್ಕಾಲಿಕ ಪಟ್ಟಿ ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 3 ಕೊನೆಯ ದಿನವಾಗಿದೆ. ಸೀಟುಗಳ ಮಾಹಿತಿಯನ್ನು ಏಪ್ರಿಲ್ 8ರಂದು ಪ್ರಕಟಿಸಲಿದ್ದು, ಏಪ್ರಿಲ್ 9ರಂದು ಪ್ರಾಯೋಗಿಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 15ರಿಂದ ಮೇ 12ರ ಅವಧಿಯಲ್ಲಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು, ವಿವರಗಳಿಗಾಗಿ https://school education.karnataka.gov.in ವೆಬ್ಸೈಟ್ ಗಮನಿಸಬಹುದಾಗಿದೆ ಎಂದು ಹೇಳಲಾಗಿದೆ.