ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ 2022 -23 ನೇ ಸಾಲಿನಲ್ಲಿ ದಾಖಲಾತಿಗೆ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಫೆಬ್ರವರಿ 3 ರಿಂದ ಅರ್ಜಿ ಸಲ್ಲಿಸಬಹುದಾಗಿದ್ದು, ಏಪ್ರಿಲ್ 30ರೊಳಗೆ ಪ್ರಕ್ರಿಯೆ ಮುಕ್ತಾಯವಾಗಲಿದೆ ಎಂದು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.
ಜನವರಿ 18 ರಂದು ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳು ಸೇರಿದಂತೆ ನೆರೆಹೊರೆಯ ಎಲ್ಲಾ ಶಾಲೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗುವುದು. ಜನವರಿ 24ರವರೆಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶವಿದೆ. ಅದೇ ದಿನ ನೆರೆಹೊರೆ ಶಾಲೆಗಳ ಅಂತಿಮ ಪಟ್ಟಿ, ಒಂದನೇ ತರಗತಿಗೆ ಅನುದಾನರಹಿತ ಶಾಲೆಗಳಲ್ಲಿ ಶಾಲಾವಾರು ಶೇಕಡ 25ರ ಪ್ರಮಾಣದಲ್ಲಿ ಲಭ್ಯವಿರುವ ಸೀಟುಗಳು ಮತ್ತು ಅನುದಾನಿತ ಶಾಲೆಗಳಲ್ಲಿ ಲಭ್ಯವಿರುವ ಸೀಟುಗಳ ಸಂಖ್ಯೆಯನ್ನು ಇಲಾಖೆಯ ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.