ಸರ್ಕಾರಿ ಆಡಳಿತ ವ್ಯವಸ್ಥೆ ಪಾರದರ್ಶಕವಾಗಿರಲಿ ಎಂಬ ಕಾರಣಕ್ಕೆ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತರಲಾಗಿದ್ದು, ಸಾರ್ವಜನಿಕರು ತಮಗೆ ಬೇಕಾದ ಮಾಹಿತಿಯನ್ನು ಈ ಕಾಯ್ದೆ ಅಡಿ ಸರ್ಕಾರಿ ಕಚೇರಿಗಳಿಂದ ಪಡೆದುಕೊಳ್ಳಬಹುದಾಗಿದೆ.
ಈ ರೀತಿ ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದ ಸಾಮಾಜಿಕ ಹೋರಾಟಗಾರರೊಬ್ಬರು ಕೇಳಿದ ಪ್ರಶ್ನೆಗೆ ಮಾಹಿತಿ ನೀಡದ ಕಾರಣಕ್ಕೆ ಗ್ರಾಮ ಪಂಚಾಯಿತಿ ಪಿಡಿಓ, ಸಾರ್ವಜನಿಕ ಮಾಹಿತಿ ಅಧಿಕಾರಿಯೊಬ್ಬರಿಗೆ ಈಗ ದಂಡ ವಿಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕಿನ ಹಾರೋಗೊಳಿಗೆ ಗ್ರಾಮ ಪಂಚಾಯಿತಿ ಪಿಡಿಓ ವಿನಾಯಕ ಅವರಿಗೆ ರಾಜ್ಯ ಮಾಹಿತಿ ಆಯೋಗ 15,000 ರೂಪಾಯಿ ದಂಡ ವಿಧಿಸಿ ಆದೇಶ ಹೊರಡಿಸಿದೆ.