alex Certify BREAKING: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ರಾಜ್ಯದ ವಿವಿಧೆಡೆ RTO ಚೆಕ್ ಪೋಸ್ಟ್ ಮೇಲೆ ದಾಳಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ರಾಜ್ಯದ ವಿವಿಧೆಡೆ RTO ಚೆಕ್ ಪೋಸ್ಟ್ ಮೇಲೆ ದಾಳಿ

ಬೆಂಗಳೂರು: ಲೋಕಾಯುಕ್ತ ಪೊಲೀಸರು ಬೆಳ್ಳಂಬೆಳಗ್ಗೆ ಕಾರ್ಯಾಚರಣೆ ನಡೆಸಿದ್ದು, ವಾಹನ ಸವಾರರಿಂದ ಹಣ ವಸೂಲಿ ಆರೋಪದ ಹಿನ್ನೆಲೆಯಲ್ಲಿ ರಾಜ್ಯದ ಹಲವು ಕಡೆಗಳಲ್ಲಿ ಆರ್.ಟಿ.ಒ.  ಚೆಕ್ ಪೋಸ್ಟ್ ಗಳ ಮೇಲೆ ದಾಳಿ ನಡೆಸಿದ್ದಾರೆ.

ಬೀದರ್ ಜಿಲ್ಲೆ ಹುಮ್ನಾಬಾದ್ ಆರ್.ಟಿ.ಒ. ಚೆಕ್ ಪೋಸ್ಟ್, ಬಳ್ಳಾರಿಯ ಹಗರಿ ಚೆಕ್ ಪೋಸ್ಟ್, ಅತ್ತಿಬೆಲೆಯ ಆರ್.ಟಿ.ಒ. ಚೆಕ್ ಪೋಸ್ಟ್ ಗಳ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

ಬೀದರ್ -ಕಲಬುರ್ಗಿ ಲೋಕಾಯುಕ್ತ ಎಸ್.ಪಿ. ನೇತೃತ್ವದ ತಂಡ ಬೆಳಗಿನ ಜಾವ ನಾಲ್ಕು ಗಂಟೆಗೆ ದಾಳಿ ನಡೆಸಿದ್ದು, ಚೆಕ್ಪೋಸ್ಟ್ ನಲ್ಲಿ ಒಂದೂವರೆ ಲಕ್ಷ ರೂಪಾಯಿ ಪತ್ತೆಯಾಗಿದೆ. ಇದು ದಂಡದ ಹಣವೇ ಅಥವಾ ಲಂಚದ ಹಣವೇ ಎಂಬುದರ ಪರಿಶೀಲನೆ ನಡೆದಿದೆ.

ಕೋಲಾರ ಜಿಲ್ಲೆ ಮುಳಬಾಗಿಲು ತಾಲ್ಲೂಕು ನಂಗಲಿ ಚೆಕ್ ಪೋಸ್ಟ್, ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿಯಲ್ಲಿ ಬೆಂಗಳೂರು -ಮುಂಬೈ ರಾಷ್ಟ್ರೀಯ ಹೆದ್ದಾರಿ 4 ರಲ್ಲಿರುವ ಚೆಕ್ಪೋಸ್ಟ್ ಮೇಲೆ ದಾಳಿ ನಡೆಸಲಾಗಿದೆ. ವಿಜಯಪುರ ಹೊರವಲಯದ ಚೆಕ್ಪೋಸ್ಟ್ ಮೇಲೆಯೂ ದಾಳಿ ಮಾಡಿ ಪರಿಶೀಲನೆ ನಡೆಸಲಾಗಿದೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...