ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಂಡಿರುವ ಸರ್ಕಾರ ಮತ್ತೊಂದು ಮಹತ್ವದ ಮೈಲಿಗಲ್ಲು ಸಾಧಿಸಿದೆ.
4 ಕೋಟಿ ಕೊರೋನಾ ಪರೀಕ್ಷೆಗಳನ್ನು ಪೂರೈಸಿದ್ದು, ಈ ಮೂಲಕ ಕೊರೋನಾ ವಿರುದ್ಧದ ಹೋರಾಟದಲ್ಲಿ ಮಹತ್ತರ ಮೈಲುಗಲ್ಲು ಸಾಧಿಸಿದೆ. ರಾಜ್ಯದ ಒಟ್ಟು ಪರೀಕ್ಷೆಗಳ 80 ಕ್ಕಿಂತ ಹೆಚ್ಚು ಆರ್ಟಿಪಿಸಿಆರ್ ಆಗಿದ್ದು, ಕರ್ನಾಟಕ ದೇಶದಲ್ಲಿಯೇ ಅತಿಹೆಚ್ಚು ಪರೀಕ್ಷೆ ನಡೆಸಿದ ರಾಜ್ಯಗಳಲ್ಲಿ ಮೂರನೇ ಸ್ಥಾನದಲ್ಲಿದೆ.
3338 ಗಂಟಲು ದ್ರವ ಸಂಗ್ರಹ ಕೇಂದ್ರಗಳು, 252 ಕೋವಿಡ್ 19 ಪ್ರಯೋಗಾಲಯಗಳು, ಶೇಕಡ 81.45 ರಷ್ಟು ಆರ್ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.