ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ.
ಮೂರು ದಿನಗಳ ಪ್ರವಾಸಕ್ಕೆ ತೆರಳಲಿರುವ ಯಡಿಯೂರಪ್ಪ ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ನಿನ್ನೆ ಬೆಳಗಾವಿಯ ಸುವರ್ಣಸೌಧದಲ್ಲಿ ಯಡಿಯೂರಪ್ಪ RTPCR ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಅವರು ನಾಳೆ ಕುಟುಂಬ ಸಮೇತರಾಗಿ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆನ್ನಲಾಗಿದೆ.