alex Certify BREAKING NEWS: ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ – ರೂಲ್ಸ್ ಪಾಲಿಸದಿದ್ರೆ ಭಾರಿ ದಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ – ರೂಲ್ಸ್ ಪಾಲಿಸದಿದ್ರೆ ಭಾರಿ ದಂಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.

ನಗರಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು. ನಗರ ಪ್ರದೇಶ ಹೊರತುಪಡಿಸಿ ಉಳಿದೆಡೆ 100 ರೂ. ದಂಡ ಹಾಕಲಾಗುವುದು.

ಮದುವೆಗಳಿಗೆ ಹೊರಾಂಗಣದಲ್ಲಿ 500 ಜನರಿಗೆ ಮಾತ್ರ ಅವಕಾಶವಿರುತ್ತದೆ. ಅದೇ ರೀತಿ ಒಳಾಂಗಣದಲ್ಲಿ 200 ಜನರಿಗೆ ಅವಕಾಶವಿದೆ. ಅಂತ್ಯಕ್ರಿಯೆಯಲ್ಲಿ 50 ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ. ಧಾರ್ಮಿಕ ಸಮಾರಂಭಗಳಿಗೆ 500 ಜನ ಮಾತ್ರ ಭಾಗಿಯಾಗಬೇಕು. ರಾಜಕೀಯ ಸಮಾರಂಭಗಳಿಗೂ 500 ಜನರು ಇರಬೇಕು. ನಿಯಮ ಮೀರಿದರೆ ಆಯೋಜಕರಿಗೆ 10 ಸಾವಿರ ರೂಪಾಯಿ ದಂಡ ವಿಧಿಸಲಾಗುವುದು.

ಸಭೆ, ಸಮಾರಂಭ ಆಯೋಜಿಸುವವರು ಮತ್ತು ಹೋಟೆಲ್ ಗಳಲ್ಲಿ ನಿಯಮ ಉಲ್ಲಂಘನೆ ಮಾಡಿದರೆ 10 ಸಾವಿರ ರೂ. ದಂಡ ಹಾಕಲಾಗುವುದು. ಕಲ್ಯಾಣ ಮಂದಿರ, ಸಮುದಾಯ ಭವನ, ಹೋಟೆಲ್, ಡಿಪಾರ್ಟ್ ಮೆಂಟಲ್ ಸ್ಟೋರ್, ಶಾಪ್ ಗಳಲ್ಲಿ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಇಲ್ಲದಿದ್ದರೆ ಆಯಾ ಸ್ಥಳದ ಮಾಲೀಕರಿಗೆ ದಂಡ ವಿಧಿಸಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...