ಬೆಂಗಳೂರು: ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸಿಎಸ್ಆರ್ ನಿಧಿ ಮೀಸಲಿಡುವಂತೆ ಉದ್ಯಮಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ.
ಬೆಂಗಳೂರು ಅರಮನೆ ಆವರಣದಲ್ಲಿ ನಡೆಯುತ್ತಿರುವ ಬೆಂಗಳೂರು ಟೆಕ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಹೆಚ್ಚಾದಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳಿಗೂ ಜಾಗತಿಕ ಮಟ್ಟದಲ್ಲಿ ಸ್ಪರ್ಧಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ.
ಅಜೀಮ್ ಪ್ರೇಮ್ ಜೀ ಸೇರಿದಂತೆ ಹಲವರೊಂದಿಗೆ ಈ ಕುರಿತಾಗಿ ಚರ್ಚಿಸಿದ್ದು, ಗ್ರಾಮೀಣ ಶಾಲೆಗಳ ಅಭಿವೃದ್ಧಿಗೆ 2 ಸಾವಿರ ರೂ. ನೀಡಲು ಅವರು ಮುಂದಾಗಿದ್ದಾರೆ. ನಾವೆಲ್ಲರೂ ಒಟ್ಟಿಗೆ ಸೇರಿ ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಪ್ರಯತ್ನಿಸೋಣ ಎಂದು ತಿಳಿಸಿದ್ದಾರೆ.