alex Certify ರಾಜ್ಯದ ಜನತೆಗೆ ಗುಡ್ ನ್ಯೂಸ್: ಇ-ಸ್ವತ್ತು ಹೊಸ ಸಾಫ್ಟ್ವೇರ್ ಸಾರ್ವಜನಿಕ ಸೇವೆಗೆ ಬಿಡುಗಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ಜನತೆಗೆ ಗುಡ್ ನ್ಯೂಸ್: ಇ-ಸ್ವತ್ತು ಹೊಸ ಸಾಫ್ಟ್ವೇರ್ ಸಾರ್ವಜನಿಕ ಸೇವೆಗೆ ಬಿಡುಗಡೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ- ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆ ಅಭಿವೃದ್ಧಿಪಡಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಶೀಘ್ರವೇ ಸಾರ್ವಜನಿಕ ಸೇವೆಗೆ ಇ-ಸ್ವತ್ತು ಸಾಫ್ಟ್ ವೇರ್ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇ- ಸ್ವತ್ತು ತಂತ್ರಾಂಶ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ತಂತ್ರಾಂಶ ಅಭಿವೃದ್ದಿಪಡಿಸಲಾಗಿದೆ. ಇದರ ಮೂಲಕ ಸಾರ್ವಜನಿಕರ ಆಸ್ತಿ, ಗ್ರಾಮಠಾಣಾದ ಒಳಗೆ ಅಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯಿತಿ ಹಂತದಲ್ಲಿ ದಿಶಾಂಕ್ ಮೂಲಕ ನಿರ್ವಹಿಸಲು ಕ್ರಮ ವಹಿಸಲಾಗಿದೆ. ಇ- ಸ್ವತ್ತು ತಂತ್ರಾಂಶದ ಹೊಸ ಅವತರಿಣಿಕೆಯನ್ನು ಲೈವ್ ಮಾಡಲಾಗುತ್ತಿರುವುದರಿಂದ ಜುಲೈ 27 ರಿಂದ ಜುಲೈ 29 ರವರೆಗೆ ಇ- ಸ್ವತ್ತು ತಂತ್ರಾಂಶ ಕಾರ್ಯನಿರ್ವಹಿಸುವುದಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...