ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ ವತಿಯಿಂದ ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಖಾಲಿ ಇರುವ 2022 ಹುದ್ದೆಗಳ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ 136 ಕಿರಿಯ ಇಂಜಿನಿಯರ್, 288 ಸಹಾಯಕ ಇಂಜಿನಿಯರ್, 24 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಹುದ್ದೆಗಳ ಭರ್ತಿಗೆ ಜನವರಿ 31ರಂದು ಅಧಿಸೂಚನೆ ಹೊರಡಿಸಿದೆ. ಇವುಗಳಲ್ಲಿ 24 ಸಹಾಯಕ ಕಾರ್ಯಪಾಲಕ ಇಂಜಿನಿಯರ್ ನೇಮಕಾತಿ ಆದೇಶ ಕೆಪಿಎಸ್‌ಸಿ ತಡೆ ಹಿಡಿದಿದ್ದು, ಉಳಿದ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ನಡೆಯುತ್ತಿದ್ದು, ಶೀಘ್ರದಲ್ಲಿ ಹುದ್ದೆಗಳ ನೇಮಕಾತಿ ಪತ್ರಗಳನ್ನು ಅಭ್ಯರ್ಥಿಗಳು ಪಡೆಯಲಿದ್ದಾರೆ.
ಈ ಹುದ್ದೆಗಳಲ್ಲಿ 20 ಕಿರಿಯ ಇಂಜಿನಿಯರ್, 18 FDA, 3 ಪ್ರಥಮ ದರ್ಜೆ ಲೆಕ್ಕ ಸಹಾಯಕರು, 42 ಎಸ್‌ಡಿಎ, 8 ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಸೇರಿದ್ದಾರೆ. ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ 256 ಪಿಡಿಒ, 220 ಗ್ರಾಪಂ ಕಾರ್ಯದರ್ಶಿ ಗ್ರೇಡ್ -1 343, ಗ್ರಾಪಂ ಕಾರ್ಯದರ್ಶಿ ಗ್ರೇಡ್- 2 ಎಸ್‌ಡಿಎ ಹುದ್ದೆಗಳನ್ನು ನೇರವಾಗಿ ತುಂಬಲು ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲಾಗಿದೆ.
ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಗಳಲ್ಲಿ ಖಾಲಿ ಇರುವ 100 FDA, 200 ಎಸ್‌ಡಿಎ, ಕಲ್ಯಾಣ ಕರ್ನಾಟಕ ವೃಂದದ 109 ಎಸ್‌ಡಿಎ, 48 FDA ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಕೆಪಿಎಸ್ಸಿಗೆ ಪ್ರಸ್ತಾವನೆ ಸಲ್ಲಿಸಲು ತಿಳಿಸಲಾಗಿದೆ.