ಬೆಂಗಳೂರು : ಗದಗದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ವಿಧಾನಪರಿಷತ್ ನಲ್ಲಿ ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ಪಂಚಾಯತ್ ರಾಜ್ ವಿವಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲಾಗುವುದು. ಈ ಸಂಬಂಧ ಹಣಕಾಸು ಇಲಾಖೆ ಜೊತೆಗೆ ಮಾತುಕತೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.
ವಿವಿಗೆ ಮಂಜೂರಾದ 64 ಬೋಧಕ ಹುದ್ದೆಗಳ ಪೈಕಿ 15 ಹುದದೆ ಮತ್ತು ಮಂಜೂರಾದ 88 ಬೋಧಕೇತರ ಹುದ್ದೆಗಳಲ್ಲಿ 17 ಹುದ್ದೆಗಳನ್ನು ನೇರ ನೇಮಕಾತಿ ಮುಖಾಂತರ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ. ಉಳಿದ ಖಾಲಿ ಹುದ್ದೆಗಳನ್ನು ಭರ್ತಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.