alex Certify ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ

ಶಿವಮೊಗ್ಗ: ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿತೆ ನಾವೆಲ್ಲ ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಕರೆ ನೀಡಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಸೆ.29 ರಂದು ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ 2024-25 ನೇ ಸಾಲಿನ ಬೆಂಗಳೂರು ಗ್ರಾಮಾಂತರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುವುದಲ್ಲದೆ, ಪರಿಪೂರ್ಣ ವಿದ್ಯೆಯ ಹೊರತಾಗಿ ಅತ್ಯುನ್ನತ ಸಾಧನೆಗೊಂದು ಅವಕಾಶ ಲಭ್ಯವಿದೆ. ಹಾಗಾಗಿ ಯುವ ಜನತೆ ದೈನಂದಿನ ಜೀವನದ ಶೈಲಿಯಲ್ಲಿ ಕ್ರೀಡೆ ಅಳವಡಿಸಿಕೊಳ್ಳುವುದು ಅಗತ್ಯ ಎಂದು ಹೇಳಿದರು.

ಶಿವಮೊಗ್ಗ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಈ ವಿಭಾಗದಲ್ಲಿ ಬಾಡ್ಮಿಂಟನ್, ಈಜು, ಟೆನ್ನಿಸ್, ಹಾಕಿ, ಜುಡೋ ಮತ್ತು ಯೋಗ ಸ್ಪರ್ಧೆಗಳನ್ನು ನಗರದ ಒಳಾಂಗಣ ಕ್ರೀಡಾಂಗಣ, ಕ್ರೀಡಾ ಸಂಕೀರ್ಣ ಮತ್ತು ವಾಜಪೇಯಿ ಬಡಾವಣೆಯಲ್ಲಿ ಆಯೋಜಿಸಲಾಗಿತ್ತು.

ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಿತ್ರದುರ್ಗ, ತುಮಕೂರು, ರಾಮನಗರ, ಚಿಕ್ಕ ಬಳ್ಳಾಪುರ ಜಿಲ್ಲೆಯ ಸುಮಾರು 600 ಕ್ಕೂ ಹೆಚ್ಚು ಸ್ಪರ್ಧಾಳುಗಳು ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಯವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೇಖ್ಯಾನಾಯ್ಕ, ಹಿರಿಯ ಯೋಗ ತರಬೇತುದಾರಾದ ವನಶ್ರಿ, ಮಂಜಪ್ಪ ,ಕ್ರೀಡಾಪಟುಗಳು, ಕ್ರೀಡಾಸಕ್ತರು ಹಾಜರಿದ್ದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...