ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೆಂಬರ್ 26 ರಂದು ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ.
ಅಖಿಲಭಾರತ ರೈತ ಸಂಘರ್ಷ ಸಮನ್ವಯ ಸಮಿತಿ(AIKSCC) ಕರ್ನಾಟಕ ಬಂದ್ ಗೆ ಕರೆ ನೀಡಿದೆ. ಕೇಂದ್ರ ಸರ್ಕಾರದ ಕೃಷಿ ವಿರೋಧಿ ತಿದ್ದುಪಡಿ ಕಾಯ್ದೆ ಹಿಂಪಡೆಯಬೇಕು. ರಾಜ್ಯ ಸರ್ಕಾರದ ಭೂ ಸುಧಾರಣಾ ತಿದ್ದುಪಡಿ ಸುಗ್ರಿವಾಜ್ಞೆ, ಎಪಿಎಂಸಿ ತಿದ್ದುಪಡಿ ಸುಗ್ರೀವಾಜ್ಞೆ ಹಿಂಪಡೆಯಬೇಕೆಂದು ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿಯ ಸದಸ್ಯರಾದ ಕವಿತಾ ಕುರಗಂಟಿ ಒತ್ತಾಯಿಸಿದ್ದಾರೆ. ಸ್ವಾಮಿನಾಥನ್ ಆಯೋಗದ ವರದಿ ಶಿಫಾರಸು ಜಾರಿಗೊಳಿಸಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನವೆಂಬರ್ 26 ರಂದು ಗ್ರಾಮೀಣ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ ಎಂದು ಹೇಳಲಾಗಿದೆ.