ಬೆಂಗಳೂರು: ಗ್ರಾಮಾಂತರ ಪ್ರದೇಶದ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ನೀಡಲು ಅಗತ್ಯ ನೆರವು ಕಲ್ಪಿಸುವಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಮನವಿ ಮಾಡಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿದ ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಕಪಿಲ್ ಮೋರೇಶ್ವರ್ ಪಾಟೀಲ್ ಪ್ರಸ್ತಾವನೆ ಸಲ್ಲಿಸಿದರೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ಮನೆ ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ಕಲ್ಪಿಸಲು ಆರ್ಥಿಕ ನೆರವು ಕೋರಿ ರಾಜ್ಯ ಸರ್ಕಾರ ಪ್ರಸ್ತಾವನೆ ಸಲ್ಲಿಸಿದಲ್ಲಿ ಕ್ರಮಕೈಗೊಳ್ಳುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ.
ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಸೌರವಿದ್ಯುತ್ ಕಲ್ಪಿಸಿದ್ದು, ಅನೇಕ ಕಡೆ ಸೌರಶಕ್ತಿ ಬೀದಿ ದೀಪ ಅಳವಡಿಸಲಾಗಿದೆ. ಮನೆಗಳಿಗೆ ಸೌರ ವಿದ್ಯುತ್ ಸೌಲಭ್ಯ ಕಲ್ಪಿಸಲು ಆರ್ಥಿಕ ನೆರವು ನೀಡಬೇಕೆಂಬ ಈಶ್ವರಪ್ಪ ಅವರ ಮನವಿಗೆ ಕೇಂದ್ರ ಸಚಿವರು ಅಗತ್ಯ ನೆರವಿನ ಭರವಸೆ ನೀಡಿದ್ದಾರೆ
ಗ್ರಾಮೀಣ ಭಾಗದಲ್ಲಿ ಜಿಮ್ ಸ್ಥಾಪನೆ ಮಾಡಲಾಗುವುದು. ಸ್ವಾಮಿತ್ವ ಯೋಜನೆಯಡಿ 50 ಲಕ್ಷ ಗ್ರಾಮೀಣ ಕುಟುಂಬಗಳಿಗೆ ಅವರ ಆಸ್ತಿ ವಿವರ ಇರುವ ಸ್ವಾಮಿತ್ವ ಕಾರ್ಡ್ ನೀಡಲಾಗಿದೆ. ಕರ್ನಾಟಕದಲ್ಲಿ ಸ್ವಾಮಿತ್ವ ಕಾರ್ಡ್ ನೀಡುವ ಯೋಜನೆಗೆ ವೇಗ ನೀಡಬೇಕಿದೆ ಎಂದು ಹೇಳಿದ್ದಾರೆ.