alex Certify ಗ್ರಾಮೀಣ ಪ್ರದೇಶದ ಜನತೆಗೆ, ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಮನೆ ಮನೆಗೆ ಶುದ್ಧ ಕುಡಿಯುವ ನೀರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಪ್ರದೇಶದ ಜನತೆಗೆ, ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಮನೆ ಮನೆಗೆ ಶುದ್ಧ ಕುಡಿಯುವ ನೀರು

ಶಿವಮೊಗ್ಗ: ಕೇಂದ್ರ ಪುರಸ್ಕೃತ ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದ ಗ್ರಾಮೀಣ ಪ್ರದೇಶಗಳ ಪ್ರತಿ ಮನೆಮನೆಗೆ ನಲ್ಲಿ ಮೂಲಕ ಶುದ್ಧ ಕುಡಿಯುವ ನೀರು ಒದಗಿಸಲು ಯೋಜನೆ ರೂಪಿಸಿದ್ದು, ವ್ಯವಸ್ಥಿತ ಅನುಷ್ಠಾನ ಕಾರ್ಯ ಪ್ರಗತಿಯಲ್ಲಿದೆ.

ರಾಜ್ಯ ಗ್ರಾಮೀಣಾಭಿವೃದ್ಧಿ, ಪಂಚಾಯತ್‍ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರು ಜಿಲ್ಲಾ ಪಂಚಾಯಿತಿಯ ಸಹ್ಯಾದ್ರಿ ಸಭಾಂಗಣದಲ್ಲಿ ಜಲಜೀವನ ಮಿಷನ್‍ನ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಈಗಾಗಲೇ ರಾಜ್ಯದ ಗ್ರಾಮೀಣ ಪ್ರದೇಶದ 24,72000 ಮನೆಗಳಿಗೆ ಶುದ್ಧ ನೀರನ್ನು ಪೂರೈಸುವ ನಲ್ಲಿಗಳನ್ನು ಅಳವಡಿಸಿ ನೀರನ್ನು ವಿತರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ ಮುಂದಿನ 100 ದಿನಗಳ ಅವಧಿಯಲ್ಲಿ 23,57000 ಮನೆಗಳಿಗೆ ನೀರು ಒದಗಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಯ ಅನುಷ್ಠಾನಕ್ಕಾಗಿ ಕೇಂದ್ರದಿಂದ 4,093 ಕೋಟಿ ರೂ. ಹಾಗೂ ರಾಜ್ಯದಿಂದ 3,982 ಕೋಟಿ ರೂ. ಸೇರಿದಂತೆ ಒಟ್ಟು 8,075 ಕೋಟಿ ರೂ.ಗಳನ್ನು ವ್ಯಯ ಮಾಡಲಾಗುವುದು. ನಿಗದಿಪಡಿಸಿದ ಕಾಲಮಿತಿಯಲ್ಲಿ ಪ್ರತಿ ಮನೆಗೆ ನೀರು ಒದಗಿಸುವ ವಿಶ್ವಾಸ ಹೊಂದಿರುವುದಾಗಿ ಹೇಳಿದ್ದಾರೆ.

ರಾಜ್ಯದ 42,036 ಸರ್ಕಾರಿ ಶಾಲೆಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಇದೆ. ಪ್ರಸಕ್ತ ಸಾಲಿನಲ್ಲಿ 39,963 ಶಾಲೆಗಳಿಗೆ ನೀರನ್ನು ಒದಗಿಸುವ ಕಾರ್ಯ ಪೂರ್ಣಗೊಂಡಿದೆ. ಪ್ರಧಾನಿಯವರ ಸೂಚನೆಯಂತೆ ಮುಂದಿನ 100 ದಿನಗಳೊಳಗಾಗಿ ಉಳಿದ 1595 ಶಾಲೆಗಳಿಗೂ ನೀರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 65,911 ಅಂಗನವಾಡಿ ಕೇಂದ್ರಗಳಿದ್ದು, ಸ್ವಂತ ಕಟ್ಟಡ ಹೊಂದಿರುವ 44,852 ಅಂಗನವಾಡಿಗಳ ಪೈಕಿ 41,799 ಅಂಗನವಾಡಿಗಳಿಗೆ ನೀರಿನ ವ್ಯವಸ್ಥೆ ಇದೆ. ಉಳಿದ ಅಂಗನವಾಡಿ ಕೇಂದ್ರಗಳಿಗೆ ಮೂರೂವರೆ ತಿಂಗಳ ಅವಧಿಯೊಳಗಾಗಿ ನೀರನ್ನು ಒದಗಿಸಲಾಗುವುದು. ಅಲ್ಲದೇ ಇತರೆ ಹಿಂದುಳಿದ ವರ್ಗಗಳ ಹಾಗೂ ಪರಿಶಿಷ್ಟ ಜಾತಿ ಜನಾಂಗಗಳ ವಸತಿ ನಿಲಯಗಳಿಗೂ ನೀರಿನ ಸಂಪರ್ಕ ಕಲ್ಪಿಸಲಾಗುವುದು ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...