ಹಾಸನ: ಜಿಲ್ಲಾ ಪಂಚಾಯತ್, ಕೈಗಾರಿಕಾ ವಿಭಾಗದ ವತಿಯಿಂದ ಜಿಲ್ಲಾ ಔಧ್ಯಮಿಕ ಕೇಂದ್ರ ಯೋಜನೆಯಡಿಯಲ್ಲಿ ಗ್ರಾಮೀಣ ಪ್ರದೇಶದ ನಿರುದ್ಯೋಗಿ ಮಹಿಳಾ ಫಲಾನುಭವಿಗಳಿಗೆ ಉಚಿತವಾಗಿ ವಿದ್ಯುತ್ ಚಾಲಿತ ಹೊಲಿಗೆಯಂತ್ರಗಳನ್ನು ಹಾಗೂ ವೃತ್ತಿನಿರತ ಕುಶಲಕರ್ಮಿಗಳಿಗೆ ಸುಧಾರಿತ ಉಪಕರಣಗಳ ವಿತರಣೆ ಯೋಜನೆಯಡಿ ಅರ್ಜಿ ಆಹ್ವಾನಿಸಲಾಗಿದೆ.
ಹಾಸನ ಜಿಲ್ಲೆಯ ಗ್ರಾಮೀಣ ಕುಶಲಕರ್ಮಿಗಳಿಗೆ, ಮರಗೆಲಸ, ಗಾರೆಕೆಲಸ, ಎಲೆಕ್ಟ್ರಿಕಲ್ ರಿಪೇರಿ, ಬೋರ್‌ಬೇಲ್ ರಿಪೇರಿ/ಮೋಟರ್ ವೈಂಡಿಂಗ್ ಉಪಕರಣಗಳನ್ನು ಉಚಿತವಾಗಿ ನೀಡಲಾಗುತ್ತಿದೆ.
ಅರ್ಜಿದಾರರು ಹಾಸನ ಜಿಲ್ಲಾ ಪಂಚಾಯತ್ ವೆಬ್‌ಸೈಟ್ ಲಿಂಕ್: https://hassan.nic.in/en/ ಹಾಗೂ https://hassan.nic.in/en/notice_category/recruitment/ ನಲ್ಲಿ ಅರ್ಜಿಯನ್ನು ಆನ್‌ಲೈನ್ ಮೂಲಕ ದಾಖಲಾತಿಗಳೊಂದಿಗೆ ಅ. 15 ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ನಿಗದಿತ ಗುರಿಗಿಂತ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾದಲ್ಲಿ ಲಾಟರಿ ಮುಖಾಂತರ ಆಯ್ಕೆ ಪ್ರಕ್ರಿಯೆ ನಡೆಸಲಾಗುವುದು ಎಂದು ಜಿಲ್ಲಾ ಪಂಚಾಯಿತಿಯ ಕೈಗಾರಿಕಾ ವಿಭಾಗದ ಉಪ ನಿರ್ದೇಶಕರು ತಿಳಿಸಿದ್ದಾರೆ.