ಬೆಂಗಳೂರು: ರಾಜ್ಯದ ಆಯ್ದ 100 ಗ್ರಾಮ ಪಂಚಾಯಿತಿಗಳಲ್ಲಿ ಸಾವಿತ್ರಿ ಬಾಯಿ ಫುಲೆ ಮಹಿಳಾ ಸಬಲೀಕರಣ ಯೋಜನೆ ಪ್ರಾರಂಭಿಸಲು ಸರ್ಕಾರ ಕ್ರಮ ಕೈಗೊಂಡಿದೆ.
ಸಾವಿತ್ರಿ ಬಾಯಿ ಪುಲೆ ಮಹಿಳಾ ಸಬಲೀಕರಣ ಯೋಜನೆ ಅಡಿ ಸ್ವಸಹಾಯ ಗುಂಪುಗಳ ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ ತರಬೇತಿ ನೀಡಲಾಗುವುದು. ಪ್ರತಿ ಜಿಲ್ಲೆಯಿಂದ ಮೂರು ಗ್ರಾಮ ಪಂಚಾಯಿತಿ ಆಯ್ಕೆ ಮಾಡಲಾಗುವುದು.
2024 -25 ನೇ ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ಮಹಿಳೆಯರ ಆಕಾಂಕ್ಷೆ ಮತ್ತು ಆಸಕ್ತಿಗಳಿಗೆ ಅನುಗುಣವಾಗಿ ಉದ್ಯೋಗ ಆಧಾರಿತ ಕೌಶಲ ತರಬೇತಿ ನೀಡಲು ಈ ಯೋಜನೆ ರೂಪಿಸಲಾಗಿದೆ. ಪ್ರತಿ ಜಿಲ್ಲೆಯಿಂದ ಮೂರು ಗ್ರಾಮ ಪಂಚಾಯಿತಿಗಳಂತೆ ಒಟ್ಟು 29 ಜಿಲ್ಲೆಗಳಿಗೆ 89 ಕೇಂದ್ರಗಳನ್ನು ಬೆಳಗಾವಿ ಜಿಲ್ಲೆಯಲ್ಲಿ 7 ಮತ್ತು ತುಮಕೂರು ಜಿಲ್ಲೆಯಲ್ಲಿ 6 ಕೇಂದ್ರಗಳು ಸೇರಿ ಒಟ್ಟು 100 ಕೇಂದ್ರಗಳನ್ನು ನರೇಗಾ ಯೋಜನೆ ಅಡಿಯಲ್ಲಿ 17.50 ಲಕ್ಷ ರೂ. ವೆಚ್ಚದಲ್ಲಿ ಕಾರ್ಯಾಗಾರ ನಡೆಸಲು ಪಂಚಾಯತ್ ರಾಜ್ ಇಲಾಖೆ ವತಿಯಿಂದ ಎಲ್ಲ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.