ಕಾರವಾರ: ಹಾಲಿನ ದರ ಹೆಚ್ಚಳ ಮಾಡುವುದರಿಂದ ಬಡವರಿಗೆ ಸಮಸ್ಯೆಯಾಗುತ್ತದೆ ಎಂದು ಶಾಸಕ ಹಾಗೂ ಆಡಳಿತ ಸುಧಾರಣೆ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.
ದರ ಹೆಚ್ಚಳದಿಂದ ಜನಸಾಮಾನ್ಯರು, ಮಕ್ಕಳು, ಬಡವರಿಗೆ ಸಮಸ್ಯೆಯಾಗುತ್ತದೆ. ಸರ್ಕಾರ ದರ ಏರಿಕೆಯನ್ನು ಮರು ಪರಿಶೀಲಿಸಬೇಕೆಂದು ನಾನು ಒತ್ತಾಯಿಸುತ್ತೇನೆ ಎಂದು ಕಾರವಾರದಲ್ಲಿ ಮಾತನಾಡಿದ ದೇಶಪಾಂಡೆ ಹೇಳಿದ್ದಾರೆ.
ಕೆಎಂಎಫ್ ನಂದಿನಿ ಹಾಲಿನ ಅರ್ಧ ಲೀಟರ್ ಪ್ಯಾಕೆಟ್ ಮತ್ತು ಒಂದು ಲೀಟರ್ ಹಾಲಿನ ಪ್ಯಾಕೆಟ್ ದರವನ್ನು ತಲಾ ಎರಡು ರೂಪಾಯಿ ಹೆಚ್ಚಿಸಲಾಗಿದೆ. ಅರ್ಧ ಲೀಟರ್ ಮತ್ತು ಒಂದು ಲೀಟರ್ ಹಾಲಿನ ಪ್ಯಾಕೆಟ್ ಗಳಿಗೆ ಮಾತ್ರ ತಲಾ 50 ಎಂಎಲ್ ಹಾಲನ್ನು ಹೆಚ್ಚುವರಿಯಾಗಿ ಸೇರಿಸಿ ಪ್ರತಿ ಪ್ಯಾಕೆಟ್ ದರವನ್ನು ಎರಡು ರೂಪಾಯಿ ಹೆಚ್ಚಳ ಮಾಡಲಾಗಿದೆ. ಅರ್ಧ ಲೀಟರ್ ಪ್ಯಾಕೆಟ್ ನಲ್ಲಿ 550 ಎಂಎಲ್. 1 ಲೀಟರ್ ಪ್ಯಾಕೆಟ್ ನಲ್ಲಿ 1050 ಎಂಎಲ್ ಹಾಲು ಲಭ್ಯವಾಗಲಿದ್ದು, ಇಂದಿನಿಂದಲೇ ಪರಿಷ್ಕೃತ ದರಗಳು ಜಾರಿಗೆ ಬಂದಿವೆ.