alex Certify ಚುನಾವಣೆ ಹೊತ್ತಲ್ಲೇ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆ ಹೊತ್ತಲ್ಲೇ ಸಚಿವ ಅಂಗಾರ ಆಸ್ಪತ್ರೆಗೆ ದಾಖಲು

ಮಂಗಳೂರು: ಮೀನುಗಾರಿಕೆ ಸಚಿವ ಎಸ್ ಅಂಗಾರ ಅನಾರೋಗ್ಯದ ಕಾರಣ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಣ್ಣ ಕರುಳಿನಲ್ಲಿ ತೊಂದರೆ ಕಾಣಿಸಿಕೊಂಡ ಕಾರಣ ಎರಡು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ಅಂಗಾರ ಚೇತರಿಸಿಕೊಳ್ಳುತ್ತಿದ್ದಾರೆ. ಎರಡು ವರ್ಷಗಳ ಹಿಂದೆಯೂ ಅವರಿಗೆ ಸಣ್ಣ ಕರುಳಿನ ಸಮಸ್ಯೆ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದರು. ಈಗ ಚೇತರಿಸಿಕೊಳ್ಳುತ್ತಿರುವ ಅವರು ಇನ್ನೆರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ. ವಿಶ್ರಾಂತಿ ಬಳಿಕ ಮತ್ತೆ ಚುನಾವಣೆ ಪ್ರಚಾರ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...