ಮಂಡ್ಯ: ತಮಿಳುನಾಡಿಗೆ 5000 ಕ್ಯೂಸೆಕ್ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಿಸಿರುವುದಕ್ಕೆ ಮಂಡ್ಯ ರೈತರು ಕಿಡಿಕಾರಿದ್ದಾರೆ.
ಈ ಹಿಂದೆ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಆಗಿದ್ದಾಗಲೂ ಇಂತಹ ಆದೇಶ ಬಂದಿತ್ತು. ಮುಖ್ಯಮಂತ್ರಿ ಆಗಿದ್ದ ಬಂಗಾರಪ್ಪ ಅವರು ತಮಿಳುನಾಡಿಗೆ ನೀರು ಹರಿಸಿರಲಿಲ್ಲ. ಹೀಗಾಗಿ ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ಒತ್ತಾಯಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದು. ತಮಿಳುನಾಡಿಗೆ ಕಾವೇರಿ ನೀರು ಹರಿಸಿದರೆ ಚಳವಳಿ ಮಾಡುತ್ತೇವೆ. ರೈಲುಗಳನ್ನು ಸಹ ತಡೆಯುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.
ಪ್ರಾಧಿಕಾರದ ಆದೇಶ ಉಲ್ಲಂಘಿಸಿದರೆ ಏನೂ ಆಗಲ್ಲ ಎಂದು ರೈತರು ಹೇಳಿದ್ದು, ರಾಜೀನಾಮೆ ನೀಡಿ ಮನೆಗೆ ಹೋಗುವಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲೋಕಸಭೆ ಚುನಾವಣೆಗಾಗಿ ತಮಿಳುನಾಡು ರಾಜ್ಯದ ಪರ ನಿಲ್ಲಬೇಡಿ. ರಾಜ್ಯದ ರಾಜಕಾರಣಿಗಳಿಗೆ ಧಿಕ್ಕಾರ. ಪ್ರಾಣ ತೆತ್ತಾದರೂ ನೀರನ್ನು ಉಳಿಸಿಕೊಳ್ಳುತ್ತೇವೆ ಎಂದು ಗುಡುಗಿದ್ದಾರೆ.