
ವಿದೇಶಾಂಗ ಸಚಿವ ಎಸ್.ಜೈಶಂಕರ್ ಲಂಡನ್ ಗೆ ಭೇಟಿ ನೀಡಿದ್ದ ವೇಳೆ ಉಗ್ರರು ಅವರ ಮೇಲೆ ದಾಳಿ ನಡೆಸಲು ಯತ್ನಿಸಿರುವ ಘಟನೆ ನಡೆದಿದೆ.
ಸಚಿವ ಜೈಶಂಕರ್ ಲಂಡನ್ ನಲ್ಲಿ ಚೆವನಿಂಗ್ ಹೌಸ್ ನಲ್ಲಿ ನಡೆದ ಕರ್ಯಕ್ರಮದಿಂದ ಹೊರಬರುತ್ತಿದ್ದರು. ಈ ವೇಳೆ ಅವರ ಮೇಲೆ ಖಲಿಸ್ತಾನಿ ಉಗ್ರರು ದಾಳಿ ನಡೆಸಲು ಯತ್ನಿಸಿದ್ದಾರೆ.
ಪ್ರತಿಭಟನೆ ನೆಪದಲ್ಲಿ ಭದ್ರತೆ ಉಲ್ಲಂಘನೆ ಮಾಡಿ ಸಚಿವ ಜೈಶಂಕರ್ ಅವರ ಕಾರಿನ ಕಡೆಗೆ ನುಗ್ಗಿದ ಉಗ್ರನೊಬ್ಬ ದಾಳಿ ನಡೆಸಲು ಯತ್ನಿಸಿದ್ದಾನೆ. ಭಾರತದ ರಾಷ್ಟ್ರಧ್ವಜವನ್ನು ಹರಿದು ಹಾಕಿದ್ದಾನೆ ಆಕ್ರೋಶ ವ್ಯಕ್ತಪಡಿಸಿದ್ದಾನೆ. ಈ ವೇಳೆ ಪ್ರತಿಭಟನಾಕಾರ ಉಗ್ರರನ್ನು ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.