ಬೆಂಗಳೂರು: ಮಾಜಿ ಮುಖ್ಯಮತ್ರಿ ಎಸ್.ಎಂಕೃಷ್ಣ (92) ವಿಧಿವಶರಾಗಿದ್ದು, ಅವರ ನಿಧನಕ್ಕೆ ರಾಜಕೀಯ ಗಣ್ಯರು, ಸಿನಿ ತಾರೆಯರು, ಕ್ರೀಡಾ ಕ್ಷೇತ್ರದ ದಿಗ್ಗಜರು ಕಂಬನಿ ಮಿಡಿದಿದ್ದಾರೆ.
ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಎಸ್.ಎಂ.ಕೃಷ್ಣ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಡಲಾಗಿದ್ದು, ಗಣ್ಯಾತಿಗಣ್ಯರು ಆಗಮಿಸಿ ಅಂತಿಮ ದರ್ಶನ ಪಡೆದಿದ್ದಾರೆ. ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ನಟಿ ರಮ್ಯಾ, ಅಶ್ವಿನಿ ಪುನೀತ್ ರಾಜ್ ಕುಮಾರ್ ಸೇರಿದಂತೆ ಹಲವರು ಎಸ್.ಎಂ.ಕೃಷ್ಣ ಅವರ ಅಂತಿಮ ದರ್ಶನ ಪಡೆದರು.
ಈ ವೇಳೆ ಮಾತನಾಡಿದ ಅನಿಲ್ ಕುಂಬ್ಳೆ, ಎಸ್.ಎಂ.ಕೃಷ್ಣ ಅಗಲಿಕೆ ರಾಜ್ಯಕ್ಕೆ ತುಂಬಲಾರದ ನಷ್ಟ. ಅವರು ನಮ್ಮ ಕುಟುಂಬದ ಸದಸ್ಯರಂತೆ ಇದ್ದರು. ನಮಗೆ ಸಾಕಷ್ಟು ಪ್ರೋತ್ಸಾಹ ನೀಡಿದ್ದರು. ಕರ್ನಾಟಕ ಹಾಗೂ ಮುಖ್ಯವಾಗಿ ಬೆಣ್ಗಳೂರಿಗೆ ಅವರ ಕೊಡುಗೆ ಅಪಾರ. ಅವರ ನಿಧನ ದು:ಖ ತಂದಿದೆ ಎಂದು ತಿಳಿಸಿದರು.