ತುಮಕೂರು: 2023ರ ಚುನಾವಣೆಯಲ್ಲಿಯೂ ನಮ್ಮ ಪಕ್ಷ ಅಧಿಕಾರಕ್ಕೆ ಬರುವುದಿಲ್ಲವೆಂದು ಜೆಡಿಎಸ್ ಶಾಸಕ ಎಸ್.ಆರ್. ಶ್ರೀನಿವಾಸ್ ಹೇಳಿದ್ದಾರೆ.
ತುಮಕೂರು ಜಿಲ್ಲೆಯ ಎಂಹೆಚ್ ಪಟ್ಟಣದಲ್ಲಿ ಮಾತನಾಡುತ್ತಿದ್ದ ಗುಬ್ಬಿ ಶಾಸಕ ಎಸ್.ಆರ್. ಶ್ರೀನಿವಾಸ್ ಅವರು, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರಲ್ಲ. ನಮ್ಮ ಪಕ್ಷ 120 ಸ್ಥಾನಗಳನ್ನು ಗೆಲ್ಲುವುದಿಲ್ಲ. ನಮ್ಮ ಪಕ್ಷದ ನಾಯಕರು ಮುಖ್ಯಮಂತ್ರಿಯೂ ಆಗುವುದಿಲ್ಲ, ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ 120 ಸ್ಥಾನಗಳನ್ನು ಗಳಿಸಲಿ. ನಂತರ ಮುಖ್ಯಮಂತ್ರಿ ಹುದ್ದೆಯ ಬಗ್ಗೆ ಚಿಂತನೆ ಮಾಡಲಿ. ಅದನ್ನು ಬಿಟ್ಟು ಪ್ರಚಾರಕ್ಕಾಗಿ ಸಿಎಂ ಹುದ್ದೆಯ ಬಗ್ಗೆ ಮಾತನಾಡುವುದು ಸರಿಯಲ್ಲ ಎಂದಿದ್ದಾರೆನ್ನಲಾಗಿದೆ.